ಆಟೋರಿಕ್ಷಾವನ್ನು ಪೊಲೀಸರು ವಶಕ್ಕೆ ಪಡೆದ ಕಾರಣ ಮನನೊಂದು ಚಾಲಕ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ)newskadaba.com ಕಾಸರಗೋಡು, ಅ. 08. ನಾಲ್ಕು ದಿನಗಳ ಹಿಂದೆ ತಾನು ಓಡಿಸುತ್ತಿದ್ದ ಆಟೋರಿಕ್ಷಾವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡ ಹಿನ್ನಲೆಯಲ್ಲಿ ಮನನೊಂದು ಚಾಲಕ ವಾಸಸ್ಥಳದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡು ನಗರದಲ್ಲಿ ನಡೆದಿದೆ.

ಮೃತಪಟ್ಟವರನ್ನು ಕರ್ನಾಟಕ ಮೂಲದ ಅಬ್ದುಲ್ ಸತ್ತಾರ್ ( 55) ಎಂದು ಗುರುತಿಸಲಾಗಿದೆ. ಕಾಸರಗೋಡು ರೈಲ್ವೆ ನಿಲ್ದಾಣ ರಸ್ತೆಯ ಬಾಡಿಗೆ ಕ್ವಾಟರ್ಸ್ ನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಸೋಮವಾರ ಸಂಜೆ ಪತ್ತೆಯಾಗಿದ್ದಾರೆ. ಸಾಲ ಪಡೆದು ಆಟೋರಿಕ್ಷಾ ಖರೀದಿಸಿದ್ದು , ಬಿಟ್ಟುಕೊಡುವಂತೆ ಹಲವು ಬಾರಿ ಠಾಣೆಗೆ ತೆರಳಿ ಪೊಲೀಸರಲ್ಲಿ ಮನವಿ ಮಾಡಿದರೂ ಪೊಲೀಸರು ಬಿಟ್ಟುಕೊಡಲು ಮುಂದಾಗಲಿಲ್ಲ ಎನ್ನಲಾಗಿದೆ. ಈ ನಡುವೆ ಸೋಮವಾರ ಸಂಜೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಘಟನೆ ಬಳಿಕ ನಗರದಲ್ಲಿ ಆಟೋ ಚಾಲಕರು ಸಂಚಾರ ಸ್ಥಗಿತ ಗೊಳಿಸಿ ಮುಷ್ಕರ ನಡೆಸಿದರು. ಆತ್ಮಹತ್ಯೆಗೆ ಸಂಬಂಧಪಟ್ಟಂತೆ ಆರೋಪಕ್ಕೆ ಸಿಲುಕಿರುವ ಕಾಸರಗೋಡು ನಗರ ಠಾಣಾ ಸಬ್ ಇನ್ಸ್ ಪೆಕ್ಟರ್ ಪಿ . ಅನೂಪ್ ರನ್ನು ಚಂದೇರ ಪೊಲೀಸ್ ಠಾಣೆಗೆ ವರ್ಗಾಹಿಸಲಾಗಿದೆ.

Also Read  ವಾಹನ ಸಂಚಾರದಲ್ಲಿ ತಾತ್ಕಾಲಿಕ ಮಾರ್ಪಾಡು - ಆದೇಶ

error: Content is protected !!
Scroll to Top