ಅ.18ರಂದು ಜಾತಿ ಗಣತಿ ವರದಿ ಸಂಪುಟದಲ್ಲಿ ಮಂಡನೆ- ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com ಬೆಂಗಳೂರು, ಅ. 08. ಮಹತ್ವದ ವಿದ್ಯಮಾನವೊಂದರಲ್ಲಿ, ‘ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ’ (ಜಾತಿ ಗಣತಿ) ವರದಿಯನ್ನು ಅ.18ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಮಂಡಿಸುತ್ತೇವೆ. ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ವರದಿ ಅನುಷ್ಠಾನದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ‘ಇದು ಬರೀ ಹಿಂದುಳಿದ ವರ್ಗಗಳ ಜಾತಿ ಸಮೀಕ್ಷೆ ಅಲ್ಲ. ಕೋಟಿ ಕನ್ನಡಿಗರ ಸಮೀಕ್ಷೆ, ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ಸಮೀಕ್ಷೆ ನಡೆದಿದೆ. ಅ.18 ರಂದು ಸಚಿವ ಸಂಪುಟ ಸಭೆಯಲ್ಲಿ ವರದಿ ಮಂಡಿಸಿ ಚರ್ಚಿಸುತ್ತೇವೆ. ವರದಿಗೆ ವಿರೋಧ ಮಾಡುವ ಪ್ರಶ್ನೆಯಿಲ್ಲ. ಎಲ್ಲರ ಅಭಿಪ್ರಾಯಗಳನ್ನೂ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇವೆ’ ಎಂದು ಸಷ್ಟಪಡಿಸಿದರು.

Also Read  ಮರ್ಧಾಳ: ಬೈಕ್ - ಕಾರು ಢಿಕ್ಕಿ ► ಸವಾರರಿಬ್ಬರಿಗೆ ಗಾಯ

error: Content is protected !!
Scroll to Top