ಪರಿಶಿಷ್ಟ ಜಾತಿ: ಯುವಜನರಿಗೆ ತರಬೇತಿ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 09. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಯುವಜನರಿಗೆ ಹೊಲಿಗೆ ತರಬೇತಿ ಹಾಗೂ ವಿಡಿಯೋಗ್ರಾಫಿ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಪರಿಶಿಷ್ಟ ಜಾತಿ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೊಲಿಗೆ ತರಬೇತಿ ಶಿಬಿರ – (20 ದಿನಗಳು), ಅಕ್ಟೋಬರ್ 7ರಿಂದ 26ರ ವರೆಗೆ ನಡೆಯಲಿದ್ದು, ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ.(ಪಾಸ್/ಫೇಲ್) 18 ರಿಂದ 40ವರ್ಷ ವಯಸ್ಸಾಗಿರಬೇಕು. ವಿಡಿಯೋಗ್ರಾಫಿ ತರಬೇತಿ ಶಿಬಿರ – (12 ದಿನಗಳು) ನವೆಂಬರ್ 15ರಿಂದ 26ರ ವರೆಗೆ ತರಬೇತಿ ಶಿಬಿರ ನಡೆಯಲಿದ್ದು, ವಿದ್ಯಾರ್ಹತೆ- ದ್ವಿತೀಯ ಪಿ.ಯು.ಸಿ. (ಪಾಸ್/ಫೇಲ್) ಮಹಿಳೆಯರಿಗೆ ಮಾತ್ರ 18 ರಿಂದ 40ವರ್ಷದವರು ತರಬೇತಿ ಶಿಬಿರದಲ್ಲಿ ಭಾಗವಹಿಸಬಹುದು. ಈ ತರಬೇತಿಗಳು ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.

ಶಿಬಿರದಲ್ಲಿ ಹಾಜರಾಗುವ ಯುವಕ/ಯುವತಿಯರಿಗೆ ಊಟೋಪಹಾರ, ಪ್ರಮಾಣ ಪತ್ರ ಹಾಗೂ ಹೊರ ಜಿಲ್ಲೆಗಳಿಂದ ಭಾಗವಹಿಸುವ ಯುವತಿಯರಿಗೆ ಸಾಮಾನ್ಯ ವಸತಿ ವ್ಯವಸ್ಥೆಯನ್ನು ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಹಾಗೂ ಅರ್ಜಿ ನಮೂನೆ ಮತ್ತು ಮಾರ್ಗಸೂಚಿಯನ್ನು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ಮಂಗಳೂರು (ದೂ.ಸಂ. 0824-2451264)  ಇವರ ಕಛೇರಿಯಲ್ಲಿ ಸಂಪರ್ಕಿಸಿ ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿ ನಮೂನೆ ಹಾಗೂ ದಾಖಲೆಗಳನ್ನು ನವೆಂಬರ್ 3ರೊಳಗೆ ಮಂಗಳಾ ಕ್ರೀಡಾಂಗಣ ಕಚೇರಿಗೆ ತಲುಪಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group