ಇಂದು ನಾಳೆ ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

(ನ್ಯೂಸ್ ಕಡಬ)newskadaba.com,. ನವದೆಹಲಿ 09: ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.

ಅದೇ ರೀತಿ .10ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಸಂಭವವಿದ್ದು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

Also Read  ವಿನಯ್ ಗೌಡ, ರಜತ್ ಕಿಶನ್ ವಿರುದ್ಧ ಎಫ್‌ಐಆರ್ ದಾಖಲು

error: Content is protected !!
Scroll to Top