ಇಂದಿನ ಚಿನ್ನದ ದರ; ಇಂದೂ ತುಸು ಅಗ್ಗವಾದ ಚಿನ್ನದ ದರ

(ನ್ಯೂಸ್ ಕಡಬ)newskadaba.com, ಅ. 09 ಬೆಂಗಳೂರು: ಬಂಗಾರದ ದರ ಸತತವಾಗಿ 4ನೇ ದಿನವೂ ಕಡಿಮೆಯಾಗಿದೆ. ಇಂದು ಸ್ವಲ್ಪವೇ ಇಳಿಕೆಯಾಗಿದೆ. ಕಳೆದ 3 ದಿನಗಳಿಂದ ಕಡಿಮೆಯಾಗಿದ್ದ ಚಿನ್ನದ ದರ ಇಂದೂ ಅಗ್ಗವಾಗಿದ್ದು ಗ್ರಾಹಕರಿಗೆ ತುಸು ಸಮಾಧಾನ ತಂದಿದೆ. ಗುರುವಾರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ ತಲಾ 1 ರೂ. ಕಡಿಮೆಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,029 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನಕ್ಕೆ 7,668 ರೂ. ಇದೆ.

22 ಕ್ಯಾರಟ್‌ ಚಿನ್ನದ ದರಗಳ ವಿವರ

22 ಕ್ಯಾರಟ್‌ನ 8 ಗ್ರಾಂ ಚಿನ್ನ 56,232 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 70,290 ರೂ. ಮತ್ತು 100 ಗ್ರಾಂಗೆ
7,02,900 ರೂ. ಪಾವತಿಸಬೇಕಾಗುತ್ತದೆ.

24 ಕ್ಯಾರಟ್‌ ಚಿನ್ನದ ದರಗಳ ವಿವರ

24 ಕ್ಯಾರಟ್‌ನ 8 ಗ್ರಾಂ ಚಿನ್ನ 61,344 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 76,680 ರೂ. ಮತ್ತು 100 ಗ್ರಾಂಗೆ 7,66,800 ರೂ. ಪಾವತಿಸಬೇಕಾಗುತ್ತದೆ.

error: Content is protected !!

Join the Group

Join WhatsApp Group