ಪಾರ್ಸಿ ಬದಲಿಗೆ ಹಿಂದೂ ಸಂಪ್ರದಾಯದಂತೆ ಟಾಟಾ ಅಂತಿಮ ಸಂಸ್ಕಾರ

(ನ್ಯೂಸ್ ಕಡಬ)newskadaba.com, ಅ.10 ಮುಂಬೈ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅಕ್ಟೋಬರ್ 9 ರಂದು ಕೊನೆಯುಸಿರೆಳೆದರು. ಅವರ ಅಂತಿಮ ಸಂಸ್ಕಾರ ಇಂದು ಸಂಜೆ 4 ಗಂಟೆಗೆ ನೆರವೇರಲಿದೆ.

ಟಾಟಾ ಅವರ ಪಾರ್ಥಿವ ಶರೀರವನ್ನು ನಾರಿಮನ್ ಪ್ಲಾಂಟ್‌ನಲ್ಲಿರುವ ಎನ್‌ಸಿಪಿಎ ಲಾನ್‌ನಲ್ಲಿ ಬೆಳಗ್ಗೆ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ರತನ್ ಟಾಟಾ ಅವರು ಪಾರ್ಸಿ ಸಮುದಾಯಕ್ಕೆ ಸೇರಿದವರಾಗಿದ್ದು, ಪಾರ್ಸಿ ಆಚರಣೆಗಳ ಬದಲಿಗೆ ಹಿಂದೂ ಸಂಪ್ರದಾಯಗಳ ಪ್ರಕಾರ ಅವರ ಅಂತಿಮ ವಿಧಿಗಳನ್ನು ನಡೆಸಲಾಗುವುದು. ಕೊರೊನಾ ಸಾಂಕ್ರಾಮಿಕ ಸಮಯದಲ್ಲಿ ಮೃತ ದೇಹಗಳನ್ನು ಸುಡುವ ವಿಧಾನಗಳಲ್ಲಿ ಬದಲಾವಣೆಗಳಾಗಿರುವುದು ಇದಕ್ಕೆ ಕಾರಣ ಎಂದು ಹೇಳಲಾಗಿದೆ.

Also Read  ಐತಿಹಾಸಿಕ ಗೆಲುವು ಸಾಧಿಸಿದ ಅಮೇರಿಕ ಅಧ್ಯಕ್ಷ ಟ್ರಂಪ್ ಗೆ ಪ್ರಧಾನಿ ಮೋದಿಯಿಂದ ಅಭಿನಂದನೆ

error: Content is protected !!
Scroll to Top