ದ.ಕ.ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ)newskadaba.com ಮಂಗಳೂರು, . 11.  ದ.ಕ. ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಆಚರಣೆಯ ಸಂದರ್ಭ (ನ.1) ನೀಡಲಾಗುವ ಜಿಲ್ಲಾ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ದ.ಕ.ಜಿಲ್ಲಾಡಳಿತವು ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಹಾಗೂ ಅನುಪಮ ಸೇವೆ ಸಾಧನೆಗೈದ ವ್ಯಕ್ತಿಗಳನ್ನು ಗುರುತಿಸಿ ಜಿಲ್ಲಾ ಪ್ರಶಸ್ತಿಯನ್ನು ನೀಡಲಿದೆ.

ಸಾಹಿತ್ಯ, ಶಿಕ್ಷಣ, ಸಂಗೀತ, ನೃತ್ಯ, ಕ್ರೀಡೆ, ಕೃಷಿ, ಲಲಿತ ಕಲೆಗಳು, ಸಮಾಜ ಸೇವೆ, ಜಾನಪದ, ಪರಿಸರ ವಿಜ್ಞಾನ, ವೈದ್ಯಕೀಯ ಸಂಶೋಧನೆ, ಪತ್ರಿಕೋದ್ಯಮ ಮುಂತಾದ ಕ್ಷೇತ್ರಗಳಲ್ಲಿ ಸಾಧನೆಗೈದವರು ಅರ್ಜಿಯನ್ನು ಸಂಕ್ಷಿಪ್ತ ದಾಖಲೆ/ ವಿವರಣೆಯೊಂದಿಗೆ ಅ.25ರೊಳಗೆ ಜಿಲ್ಲಾಧಿಕಾರಿ ಕಚೇರಿಗೆ ನೀಡಲು ಅಪರಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 

Scroll to Top