ಜಲಪ್ರದೇಶಗಳಿಗೆ ಪ್ರವೇಶ ನಿರ್ಬಂಧ ಆದೇಶ ಹಿಂತೆಗೆತ

(ನ್ಯೂಸ್ ಕಡಬ) newskadaba.com ಅ. 11. ಮುಂಗಾರು ಅವಧಿ ಮುಕ್ತಾಯವಾಗಿರುವುದರಿಂದ ಹಾಗೂ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಇರುವ ಜಲಪಾತ, ನದಿ, ಸಮುದ್ರ, ಜಲಾಶಯ ಪ್ರದೇಶಗಳಲ್ಲಿ ಸಾರ್ವಜನಿಕರು/ಪ್ರವಾಸಿಗರು ನೀರಿನಲ್ಲಿ ಇಳಿಯುವುದು, ಈಜುವುದು. ಸಾಹಸ ಚಟುವಟಿಕೆಗಳನ್ನು ನಡೆಸುವುದನ್ನು ನಿರ್ಬಂಧಿಸಿ  ಜುಲೈ 6ರಂದು ಹೊರಡಿಸಿರುವ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಆದೇಶಿಸಿದ್ದಾರೆ.

 

Also Read  ಆಗಸ್ಟ್‌ 15 ರಂದು ಕೊರೋನಾ ಸೋಂಕಿನಿಂದ ಸ್ವಾತಂತ್ಯ್ರ ಪಡೆಯುವ ಸಂಕಲ್ಪ ಮಾಡೋಣ ➤ ಪ್ರಧಾನಿ ನರೇಂದ್ರ ಮೋದಿ

error: Content is protected !!
Scroll to Top