ಅ.20ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ

(ನ್ಯೂಸ್ ಕಡಬ) newskadaba.com ಅ. 11. ಭಾರತ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಮಂತ್ರಾಲಯದ ಅಧೀನದಲ್ಲಿ ಬರುವ ಸ್ವಾಯತ್ತ ವೈಜ್ಞಾನಿಕ ಸಂಸ್ಥೆಯಾದ ರಾಷ್ಟ್ರೀಯ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ (NIELIT)ಯು ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯದ ನ್ಯಾಷನಲ್ ಕೆರಿಯರ್ ಸರ್ವಿಸ್ (NCS) ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಸಹಕಾರದೊಂದಿಗೆ ಉದ್ಯೋಗ ಮೇಳವು ಅಕ್ಟೋಬರ್ 20ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಬೆಂಗಳೂರು ನಗರ ಜಿಲ್ಲೆಯ ಕೆ.ಎಲ್.ಇ. ಸಂಸ್ಥೆಯ ಎಸ್. ನಿಜಲಿಂಗಪ್ಪ ಮಹಾವಿದ್ಯಾಲಯ, #1040, 28ನೇ ಕ್ರಾಸ್ ರಸ್ತೆ, 2ನೇ ಬ್ಲಾಕ್, ರಾಜಾಜಿನಗರ, ಬೆಂಗಳೂರು-10, ಇಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

Also Read  ರಾಜ್ಯದ 9 ವಿಶ್ವವಿದ್ಯಾನಿಲಯ ಮುಚ್ಚುವುದು ಸುಲಭದ ಕೆಲಸವಲ್ಲ: ಅಶ್ವಥ್ ನಾರಾಯಣ್

ಈ ಪ್ರಯುಕ್ತ, ರಾಜ್ಯದ ವಿವಿಧ ಭಾಗಗಳಿಂದ ಉದ್ಯೋಗಾಕಾಂಕ್ಷಿಗಳು ಮತ್ತು ರಾಜ್ಯದ ಎಲ್ಲಾ ವಲಯಗಳಿಂದ 100ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್/ಮಧ್ಯಮ/ಸಣ್ಣ ಉದ್ಯೋಗದಾತರ ಸಂಸ್ಥೆಗಳು ಭಾಗವಹಿಸುವ ನಿರೀಕ್ಷೆ ಇದ್ದು, ಜಿಲ್ಲೆಯ ಎಲ್ಲಾ ಉದ್ಯೋಗಾಕಾಂಕ್ಷಿಗಳು https://jobfair.calicut.nielit.in ಗೆ ಭೇಟಿ ನೀಡಿ ತಮ್ಮ ಸ್ವ-ವಿವರಗಳನ್ನು ಉಚಿತವಾಗಿ ನೋಂದಣಿ ಮಾಡಿ ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top