ಬಿಜೆಪಿ ಮುಖಂಡರ ಮನೆಗೆ ನುಗ್ಗಿ ಯುವಕರ ದಾಂಧಲೆ: ಇಬ್ಬರು ಅರೆಸ್ಟ್



(ನ್ಯೂಸ್ ಕಡಬ)newskadaba.com ಮಂಗಳೂರು, . 11.  ನಗರದ ಪ್ರತಿಷ್ಠಿತ ಬಿಲ್ಡರ್ ಹಾಗೂ ಬಿಜೆಪಿ ಮುಖಂಡರೊಬ್ಬರ ಮನೆಗೆ ಯುವಕರು ನುಗ್ಗಿ ದಾಂಧಲೆ ನಡೆಸಿದ ಘಟನೆ ಗುರುವಾರ ರಾತ್ರಿ ನಡೆದಿದೆ.







ಬಿಲ್ಡರ್ ಹಾಗೂ ಬಿಜೆಪಿ ಮುಖಂಡ ಜಿತೇಂದ್ರ ಕೊಟ್ಟಾರಿ ಮನೆಗೆ ಇಬ್ಬರು ಯುವಕರು ನುಗ್ಗಿ ದಾಂಧಲೆ ನಡೆಸಿದ್ದು ಅವರನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಅನುಶ್ ಶೆಟ್ಟಿ ಹಾಗೂ ಅಂಕಿತ್ ಶೆಟ್ಟಿ ಎಂದು ಗುರುತಿಸಲಾಗಿದೆ. ಜಿತೇಂದ್ರ ಕೊಟ್ಟಾರಿ ಮೇಲೆ ಹಲ್ಲೆ ನಡೆಸಿ ತಡೆಯಲು ಬಂದ ಪತ್ನಿ ಮೇಲೂ ಹಲ್ಲೆ ಯತ್ನ ಮಾಡಿದ್ದು ಘಟನೆ ಸಂಬಂಧಿಸಿ ಬರ್ಕೆ ಠಾಣೆಗೆ ಜಿತೇಂದ್ರ ಕೊಟ್ಟಾರಿ ದೂರು ನೀಡಿದ್ದು ದೂರು ಪಡೆದು ಎಫ್ಐಆರ್ ದಾಖಲಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.






 

error: Content is protected !!
Scroll to Top