ಮಾಣಿ: ಮೊದಲ ಮಳೆಗೆ ಕೆಎಸ್ಸಾರ್ಟಿಸಿ ಬಸ್ ಪಲ್ಟಿ ► ಗರ್ಭಿಣಿ ಮಹಿಳೆ ಸೇರಿ ಇಬ್ಬರು ಗಂಭೀರ, ಹಲವರಿಗೆ ಗಾಯ



(ನ್ಯೂಸ್ ಕಡಬ) newskadaba.com ವಿಟ್ಲ, ಮಾ.14. ಸರ್ಕಾರಿ ಬಸ್ಸೊಂದು ಚಾಲಕನ ನಿಯಂತ್ರಣ ಕಳೆದು ರಸ್ತೆ ಬದಿಗೆ ಉರುಳಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿಯಲ್ಲಿ ಸಂಭವಿಸಿದೆ.







ಘಟನೆಯಲ್ಲಿ ಬಸ್ಸಿನಲ್ಲಿದ್ದ ಗರ್ಭಿಣಿ ಮಹಿಳೆ ಸೇರಿದಂತೆ ಇಬ್ಬರು ಗಾಯಗೊಂಡಿದ್ದು, ಹತ್ತಕ್ಕೂ ಅಧಿಕ ಮಂದಿ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಉಪ್ಪಿನಂಗಡಿ ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ ಸುರಿಯುತ್ತಿರುವ ಮಳೆಯ ಅಬ್ಬರಕ್ಕೆ ಚಾಲಕನ ನಿಯಂತ್ರಣ ಕಳೆದು ರಸ್ತೆಗೆ ಉರುಳಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತ ನಡೆದ ಸಂದರ್ಭದಲ್ಲಿ ರಸ್ತೆ ಕಾಮಗಾರಿ ನಡೆಸುತ್ತಿದ್ದ ಹಿಟಾಚಿಯ ಮೂಲಕ ಬಸ್ಸನ್ನು ಮೇಲಕ್ಕೆತ್ತಿ ಪ್ರಯಾಣಿಕರನ್ನು ರಕ್ಷಿಸಲಾಗಿದೆ.






error: Content is protected !!
Scroll to Top