(ನ್ಯೂಸ್ ಕಡಬ)newskadaba.com ಹೊಸದಿಲ್ಲಿ, ಅ. 11. ನೊಬೆಲ್ ಸಮಿತಿಯು 2024ರ ನೊಬೆಲ್ ಶಾಂತಿ ಪ್ರಶಸ್ತಿಗೆ ಜಪಾನ್ ನ ʼನಿಹಾನ್ ಹಿಡಾಂಕ್ಯೊʼ ಸಂಸ್ಥೆಯನ್ನು ಆಯ್ಕೆ ಮಾಡಿದೆ.
ಹಿರೋಷಿಮಾ ಮತ್ತು ನಾಗಸಾಕಿಯ ಪರಮಾಣು ಬಾಂಬ್ ದಾಳಿಯಿಂದ ಬದುಕುಳಿದವರನ್ನು ಪ್ರತಿನಿಧಿಸುವ ಈ ಜಪಾನೀಸ್ ಸಂಸ್ಥೆಗೆ ಹಿಬಾಕುಶಾ ಎಂದು ಕೂಡ ಕರೆಯಲಾಗುತ್ತದೆ. ಪರಮಾಣು ಶಸ್ತ್ರಾಸ್ತ್ರಗಳಿಂದ ಮುಕ್ತವಾದ ಜಗತ್ತನ್ನು ನಿರ್ಮಿಸಲು ದಣಿವರಿಯದ ಪ್ರಯತ್ನಗಳಿಗಾಗಿ ಈ ಬಹುಮಾನವನ್ನು ನೀಡಲಾಗಿದೆ ಎಂದು ಸಮಿತಿಯು ತಿಳಿಸಿದೆ.