ಆಲಂಕಾರು: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ ► ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) newskadaba.com ಕಡಬ, ಮಾ.14. ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿದ್ದು, ಪ್ರಯಾಣಿಕರು ಪವಾಡಸದೃಶವಾಗಿ ಅಪಾಯದಿಂದ ಪಾರಾದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆಲಂಕಾರಿನಲ್ಲಿ ಬುಧವಾರ ರಾತ್ರಿ ನಡೆದಿದೆ.

ಕಡಬದಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ KA.02.ME.3434 ನೋಂದಣಿಯ ಕಾರು ಮಳೆಯಿದ್ದ ಕಾರಣದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮಹಿಳೆಯರು, ಮಕ್ಕಳು ಪವಾಡಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಿದ್ಯುತ್ ಕಂಬ ಮುರಿದು ಬಿದ್ದಿದೆ. ವಿದ್ಯುತ್ ಇಲ್ಲದ ಕಾರಣ ಸಂಭಾವ್ಯ ಅನಾಹುತವೊಂದು ತಪ್ಪಿದೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಕೋಟ : ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಏಳನೇ ತರಗತಿ ವಿದ್ಯಾರ್ಥಿ

error: Content is protected !!
Scroll to Top