ರೈಲು ಅಪಘಾತ:  7 ಪ್ರಯಾಣಿಕರಿಗೆ ಗಂಭೀರ ಗಾಯ



(ನ್ಯೂಸ್ ಕಡಬ) newskadaba.com ಚೆನೈ,ಅ. 12.  ಮೈಸೂರು-ದರ್ಭಂಗಾ ಬಾಗಮತಿ ಎಕ್ಸ್‌ಪ್ರೆಸ್ ಮತ್ತು ಸರಕು ಸಾಗಣೆ ರೈಲು ಮಧ್ಯೆ ಚೆನ್ನೈಗೆ ಸಮೀಪವಿರುವ ಕವರೈಪೆಟ್ಟೈ ಬಳಿ ಶುಕ್ರವಾರ ರಾತ್ರಿ ಸಂಭವಿಸಿದ ರೈಲು ಅಪಘಾತದಲ್ಲಿ ಏಳು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ದಕ್ಷಿಣ ರೈಲ್ವೆ ತಿಳಿಸಿದೆ.







 

ಹಳಿತಪ್ಪಿದ ಬಾಗ್ಮತಿ ಎಕ್ಸ್‌ ಪ್ರೆಸ್‌ನ 13 ಬೋಗಿಗಳಲ್ಲಿ ಸಿಲುಕಿದ್ದ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳ ಪೈಕಿ ಗಂಭೀರ ಗಾಯಗೊಂಡ ಮೂವರು ಪ್ರಯಾಣಿಕರನ್ನು ಸ್ಟಾನ್ಲಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಸಣ್ಣಪುಟ್ಟ ಗಾಯಗಳಾಗಿರುವ ನಾಲ್ವರು ಪೊನ್ನೇರಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.






 

error: Content is protected !!
Scroll to Top