ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಗ್ಲಾ ಮೂಲದ ವ್ಯಕ್ತಿಯ ಬಂಧನ..!

crime, arrest, suspected

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 12.  ಅಕ್ರಮವಾಗಿ ಭಾರತಕ್ಕೆ ಬಂದು ಉಳಿದುಕೊಂಡಿದ್ದಲ್ಲದೆ, ಅಕ್ರಮ ಪಾಸ್ಪೋರ್ಟ್ ಮಾಡಿಕೊಂಡು ದುಬೈಗೆ ಹಾರಲು ಯತ್ನಿಸಿದ ಬಾಂಗ್ಲಾ ಮೂಲದ ವ್ಯಕ್ತಿಯೊಬ್ಬನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಬಾಂಗ್ಲಾದೇಶ ಮೂಲದ ನಿವಾಸಿಯನ್ನು ಮಾಣಿಕ್ ಹುಸೈನ್ (26) ಎಂದು ಗುರುತಿಸಲಾಗಿದೆ. ಈತ 2017ರಲ್ಲಿ ಪಶ್ಚಿಮ ಬಂಗಾಳ ಗಡಿಯ ಮೂಲಕ ಬಾಂಗ್ಲಾದಿಂದ ಭಾರತಕ್ಕೆ ಬಂದಿದ್ದ. ಆನಂತರ, ತಮಿಳುನಾಡಿನ ಚೆನ್ನೈನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ತಿಳಿದುಬಂದಿದೆ. ಇದೀಗ ಮಂಗಳೂರು ವಿಮಾನ ನಿಲ್ದಾಣದ ಮೂಲಕ ದುಬೈಗೆ ಹಾರಲು ಯತ್ನಿಸುತ್ತಿದ್ದಾಗಲೇ ಎಮಿಗ್ರೇಷನ್ ಅಧಿಕಾರಿಗಳು ಸಂಶಯದಲ್ಲಿ ತಪಾಸಣೆ ನಡೆಸಿದ್ದು ವಶಕ್ಕೆ ಪಡೆದಿದ್ದಾರೆ.

Also Read  ಮಂಗಳೂರು: ನಂಬರ್ ಪ್ಲೇಟ್ ನಿಯಮ ಉಲ್ಲಂಘನೆ ವಿರುದ್ದ ಕಾರ್ಯಾಚರಣೆ ➤ 87 ಪ್ರಕರಣ ದಾಖಲು

 

error: Content is protected !!
Scroll to Top