27 ಸಾವಿರ ಕೋಟಿ ವೆಚ್ಚದಲ್ಲಿ ಬಾಹ್ಯಾಕಾಶ ಕಣ್ಗಾವಲು ಯೋಜನೆಗೆ ಒಪ್ಪಿಗೆ ನೀಡಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಅ. 12. ಬಾಹ್ಯಾಕಾಶದಿಂದ ಕಣ್ಗಾವಲು ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸ್ಪೇಸ್ ಬೇಸ್ಡ್ ಸರ್ವೈವಲೆನ್ಸ್ (ಎಸ್ಬಿಎಸ್-3) ಮಹತ್ವಾಕಾಂಕ್ಷಿ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಭದ್ರತೆ ಕುರಿತ ಸಂಪುಟ ಸಮಿತಿ ಒಪ್ಪಿಗೆ ನೀಡಿದೆ.

ಈ ಯೋಜನೆಯಡಿ ಹಲವು ಬೇಹುಗಾರಿಕೆ ಉಪಗ್ರಹಗಳನ್ನು ಕೆಳ ಭೂ ಮತ್ತು ಭೌಗೋಳಿಕ ಕಕ್ಷೆಗೆ ಕಳುಹಿಸಲು ಉದ್ದೇಶಿಸಲಾಗಿದೆ. “ಇತ್ತೀಚೆಗೆ ನಡೆದ ಸಿಸಿಎಸ್ ಸಭೆಯಲ್ಲಿ ಎಸ್ಬಿಎಸ್-3 ಯೋಜನೆಯಡಿ 52 ಉಪಗ್ರಹಗಳನ್ನು ಉಡಾಯಿಸುವ ಪ್ರಸ್ತಾವಕ್ಕೆ ಒಪ್ಪಿಗೆ ನೀಡಲಾಗಿದ್ದು, ಇದಕ್ಕೆ ಸುಮಾರು 27 ಸಾವಿರ ಕೋಟಿ ರೂಪಾಯಿ ವೆಚ್ಚವಾಗಲಿದೆ” ಎಂದು ಉನ್ನತ ಮೂಲಗಳು ಹೇಳಿವೆ.

Also Read  ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿಕೊಂಡ ಪ್ರಿಯಾಂಕಾ ಗೋಸ್ವಾಮಿ ಮತ್ತು ಆಕಾಶದೀಪ್ ಸಿಂಗ್!

 

 

error: Content is protected !!
Scroll to Top