ಪುತ್ತೂರು ರೈಲ್ವೇ ನಿಲ್ದಾಣದಲ್ಲಿ ಅನ್ಯಧರ್ಮದ ವ್ಯಕ್ತಿಗೆ ಹಲ್ಲೆ – ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

Crime

(ನ್ಯೂಸ್ ಕಡಬ) newskadaba.com ಅ. 12. ಬೆಂಗಳೂರಿನಿಂದ ಬರುತ್ತಿದ್ದ ರೈಲಿನಲ್ಲಿದ್ದ ಸುಳ್ಯದ ವ್ಯಕ್ತಿಯೋರ್ವರಿಗೆ ಅದೇ ರೈಲಿನಲ್ಲಿ ಬಂದ ನಾಲ್ವರು ಕಬಕ ಪುತ್ತೂರು ರೈಲು ನಿಲ್ದಾಣದಲ್ಲಿ ಹಲ್ಲೆ ನಡೆಸಿ ಪರಾರಿಯಾಗಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ನಾಲ್ವರನ್ನು ಕೆಲವೇ ಕ್ಷಣಗಳಲ್ಲಿ ವಶಕ್ಕೆ ಪಡೆದ ಘಟನೆ ಪುತ್ತೂರಿನಲ್ಲಿ ನಡೆದಿದೆ.


ಬೆಂಗಳೂರಿನಿಂದ ಪುತ್ತೂರು ಮಾರ್ಗವಾಗಿ ಮಂಗಳೂರಿಗೆ ಹೋಗುತ್ತಿದ್ದ ರೈಲಿನಲ್ಲಿ ಕೆಲವರು ಗಲಾಟೆ ಮಾಡುತ್ತಿರುವುದಾಗಿ ವ್ಯಕ್ತಿಯೊಬ್ಬರು ರೈಲ್ವೇ ಪೊಲೀಸರಿಗೆ ನೀಡಿದ್ದ ಮಾಹಿತಿಯಂತೆ ಪೊಲೀಸರು ನಾಲ್ವರಿಗೆ ಎಚ್ಚರಿಕೆ ನೀಡಿದ್ದರು. ಆದರೆ ಪೊಲೀಸರಿಗೆ ದೂರು ನೀಡಿದ ವ್ಯಕ್ತಿಯನ್ನೇ ಟಾರ್ಗೆಟ್ ಮಾಡಿದ ನಾಲ್ವರು ಯುವಕರು, ರೈಲು ಕಬಕ ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಬರುತ್ತಿದ್ದಂತೆಯೇ ದೂರು ನೀಡಿದ ವ್ಯಕ್ತಿಗೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಈ ಕುರಿತು ಪುತ್ತೂರು ನಗರ ಠಾಣಾ ಪೊಲೀಸರಿಗೆ ಬಂದ ಮಾಹಿತಿಯಂತೆ ಪರಾರಿಯಾದ ನಾಲ್ವರನ್ನು ಸಾಲ್ಮರ ಮಸೀದಿಯ ಬಳಿಯಿಂದ ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದುಬಂದಿದೆ.

Also Read  ಕೊರೋನ ವೈರಸ್: ದ.ಕ.ಜಿಲ್ಲೆಯಲ್ಲಿ ಸತತ 10 ನೇ ದಿನವೂ ಯಾವುದೇ ಪಾಸಿಟಿವ್ ಇಲ್ಲ

error: Content is protected !!
Scroll to Top