ಜಿಲ್ಲೆಯಲ್ಲಿ ಮೊದಲ ಮಳೆಗೆ ಮೊದಲ ಬಲಿ ► ಮಾಣಿ ಅಪಘಾತದ ಗಾಯಾಳು ಮೃತ್ಯು



(ನ್ಯೂಸ್ ಕಡಬ) newskadaba.com ವಿಟ್ಲ, ಮಾ.15. ಜಿಲ್ಲೆಯಲ್ಲಿ ಮೊದಲ ಮಳೆಗೆ ಮೊದಲ ಬಲಿಯಾಗಿದ್ದು, ಬುಧವಾರದಂದು ಮಾಣಿಯಲ್ಲಿ ನಡೆದ ರಸ್ತೆ ಅಪಘಾತದ ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.







ಮೃತರನ್ನು ಉಪ್ಪಿನಂಗಡಿಯ ರಾಮನಗರ ನಿವಾಸಿ ದಿವ್ಯ ಪ್ರಭು(40) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ರತ್ನಾ ಪ್ರಭು(71), ದೀಪ್ತಿ ಪ್ರಭು(11) ಯಶಸ್ ಪ್ರಭು(08) ಹಾಗೂ ಬಸ್ ನಿರ್ವಾಹಕ ಪ್ರಭಾಕರ್ ಎಂದು ಗುರುತಿಸಲಾಗಿದೆ. ಗಾಯಾಳುಗಳಿಗೆ ಬಿ.ಸಿ.ರೋಡ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಉಪ್ಪಿನಂಗಡಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಢಿಕ್ಕಿ ಹೊಡೆದು ಪಲ್ಟಿಯಾಗಿ ಐದು ಮಂದಿ ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿಯಲ್ಲಿ ಸಂಭವಿಸಿತ್ತು. ಅಪಘಾತ ನಡೆದ ಸಂದರ್ಭದಲ್ಲಿ ರಸ್ತೆ ಕಾಮಗಾರಿ ನಡೆಸುತ್ತಿದ್ದ ಹಿಟಾಚಿಯ ಮೂಲಕ ಬಸ್ಸನ್ನು ಮೇಲಕ್ಕೆತ್ತಿ ಪ್ರಯಾಣಿಕರನ್ನು ರಕ್ಷಿಸಲಾಗಿತ್ತು. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top