ಪಾಕ್‌ನಲ್ಲಿ 2 ದಿನ ಲಾಕ್​ಡೌನ್ ಘೋಷಣೆ: ಶಾಲಾ, ಕಾಲೇಜುಗಳಿಗೆ ರಜೆ, ಮದುವೆಗೆ ನಿಷೇಧ

(ನ್ಯೂಸ್ ಕಡಬ) news kadaba.com ಅ. 14. ಅಕ್ಟೋಬರ್ 15 ಹಾಗೂ 16 ರಂದು ಇಸ್ಲಾಮಾಬಾದ್‌ನಲ್ಲಿ ನಡೆಯಲಿರುವ ಎಸ್‌ಸಿಒ ಶೃಂಗಸಭೆ ಎರಡು ದಿನಗಳ ಕಾಲ ಲಾಕ್​ಡೌನ್ ಘೋಷಿಸಲಾಗಿದೆ. ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಮದುವೆಗಳಿಗೂ ನಿಷೇಧ ಹೇರಲಾಗಿದೆ. ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಚೀನಾದ ಪ್ರಧಾನಿ ಲಿ ಕಿಯಾಂಗ್ ಸೇರಿದಂತೆ ಹಲವು ಪ್ರಮುಖ ನಾಯಕರು ಈ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ.


ಪಾಕಿಸ್ತಾನ ಸೇನೆಯ ಸುಮಾರು 10,000 ಸೈನಿಕರು ಮತ್ತು ಕಮಾಂಡೋಗಳನ್ನು ಇಸ್ಲಾಮಾಬಾದ್ ಮತ್ತು ರಾವಲ್ಪಿಂಡಿಯಲ್ಲಿ ನಿಯೋಜಿಸಲಾಗಿದೆ. ಇನ್ನು ಸ್ಥಳೀಯ ಪೊಲೀಸರು ಮತ್ತು ಇತರ ಭದ್ರತಾ ಪಡೆಗಳು ಈಗ ನೇರವಾಗಿ ಮಿಲಿಟರಿಯಿಂದ ಆದೇಶಗಳನ್ನು ತೆಗೆದುಕೊಳ್ಳಲಿವೆ ಎನ್ನಲಾಗಿದೆ. ಅಕ್ಟೋಬರ್ 12 ರಿಂದ 16 ರವರೆಗೆ ಇಸ್ಲಾಮಾಬಾದ್ ಮತ್ತು ರಾವಲ್ಪಿಂಡಿಯಲ್ಲಿ ಮದುವೆ ಹಾಲ್‌ಗಳು, ಕೆಫೆಗಳು, ರೆಸ್ಟೋರೆಂಟ್‌ಗಳು ಮತ್ತು ಸ್ನೂಕರ್ ಕ್ಲಬ್‌ಗಳನ್ನು ಮುಚ್ಚಲು ಆದೇಶ ಹೊರಡಿಸಲಾಗಿದೆ.

error: Content is protected !!

Join WhatsApp Group

WhatsApp Share