(ನ್ಯೂಸ್ ಕಡಬ) newskadaba.com ಕಲಬುರಗಿ, ಅ. 15. ನಗರದ ಹೊರವಲಯದ ಕೇಂದ್ರ ಕಾರಾಗೃಹದಲ್ಲಿ ಖೈದಿಗಳ ರಾಜಾತಿಥ್ಯದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲ ಕೈದಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.
ಜೈಲಿನಲ್ಲಿ ಕೈದಿಗಳು ಐಶಾರಾಮಿ ಜೀವನ ನಡೆಸುತ್ತಿರುವ ಫೋಟೋ,ವಿಡಿಯೋ ವೈರಲ್ ಆಗಿರುವ ಬೆನ್ನಲ್ಲೇ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪಾ ಢಘೆ ಅವರು ಕೇಂದ್ರ ಕಾರಾಗೃಹದ ಮೇಲೆ ರಾತ್ರೋ ರಾತ್ರಿ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕೈದಿಗಳ ಬಳಿ ಎರಡು ಮೊಬೈಲ್, ರಾಡ್, ಬೀಡಿ, ಗುಟ್ಕಾ, ಸಿಗರೇಟು ಪ್ಯಾಕೇಟ್ ಸಿಕ್ಕಿದ್ದು, ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ.