(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 15. ಮಾದಕ ವಸ್ತುಗಳ ನಿಯಂತ್ರಣಕ್ಕೆ ಕಾನೂನುಗಳಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಲು ಸರ್ಕಾರ ಯೋಚಿಸುತ್ತಿದೆ. ಯುವಜನತೆ ಈ ದುಶ್ಚಟಕ್ಕೆ ಬಲಿಯಾಗದಂತೆ, ಮಾದಕ ವಸ್ತುಗಳ ದಂಧೆಯನ್ನು ನಿಗ್ರಹಿಸುವುದೇ ಸರ್ಕಾರದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ರಾಜ್ಯ NSS ಕೋಶ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಬಾಗಿತ್ವದಲ್ಲಿ ವಿಧಾನಸೌಧ ದ ಬ್ಯಾಕ್ವೆಟ್ಹಾಲ್ ನಲ್ಲಿ ಆಯೋಜಿಸಲಾಗಿದ್ದ ತಂಬಾಕು ಮುಕ್ತ ಯುವ ಅಭಿಯಾನ 2.0 ಬೃಹತ್ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು.