ಕರ್ನಾಟಕ ವಿದ್ಯುತ್ ನಿಗಮದಲ್ಲಿ ಉದ್ಯೋಗಾವಕಾಶ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 15. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಸಂಸ್ಥೆಯಲ್ಲಿ ಕೆಲಸ ಮಾಡಲು ಆಸಕ್ತಿ ಇದ್ದಲ್ಲಿ ಇಲ್ಲೊಂದು ಸುವರ್ಣ ಅವಕಾಶವಿದೆ. ಹೌದು, KPTCL ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ 2,975 ಕಿರಿಯ ಸ್ಟೇಶನ್ ಅಟೆಂಡಂಟ್, ಕಿರಿಯ ಪವರ್‌ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆಯ ಮೂಲಕ 2024 ಅಕ್ಟೋಬರ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಸಂಸ್ಥೆಯಲ್ಲಿ ಉದ್ಯೋಗ ಪಡೆಯಲು ವಿದ್ಯಾರ್ಹತೆ 10ನೇ, 12ನೇ ತರಗತಿ ಪಾಸಾಗಿರಬೇಕು. ಡಿಪ್ಲೋಮಾ, ಬಿ.ಇ ಅಥವಾ ಬಿ.ಟೆಕ್ ತೇರ್ಗಡೆಯಾಗಿರಬೇಕು. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 21-ಅಕ್ಟೋಬರ್-2024 ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-ನವೆಂಬರ್-2024.

ಒಟ್ಟು ಹುದ್ದೆಗಳು: 2975

ಅರ್ಜಿ ಸಲ್ಲಿಸುವ ವಿಧಾನ: ಆನ್​​ಲೈನ್ (Online)

Also Read  ಚಾಲಕನ ನಿಯಂತ್ರಣ ತಪ್ಪಿ ಗೋಡೆಗೆ ಬಡಿದ ಕಾರು ➤ ಓರ್ವ ಮೃತ್ಯು

ಉದ್ಯೋಗ ಸ್ಥಳ – ಕರ್ನಾಟಕ

ವಿದ್ಯಾರ್ಹತೆ: 10ನೇ, 12ನೇ, ಡಿಪ್ಲೋಮಾ, ಬಿ.ಇ ಅಥವಾ ಬಿ.ಟೆಕ್

ವಯೋಮಿತಿ: 2024 ನವೆಂಬರ್ 20ರಂತೆ ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷವಾಗಿರಬೇಕು.

KPTCL ವಯೋಮಾನ ಸಡಿಲಿಕೆ: ಎಸ್‌ಸಿ/ಎಸ್‌ಟಿ/ಕ್ಯಾಟ್-I ಅಭ್ಯರ್ಥಿಗಳು: 05 ವರ್ಷ ಸಡಿಲಿಕೆ.

ಪ್ರವರ್ಗ -2ಎ/2ಬಿ/3ಎ & 3ಬಿ ಅಭ್ಯರ್ಥಿಗಳು: 03 ವರ್ಷ ಸಡಿಲಿಕೆ

ವೇತನ ಶ್ರೇಣಿ:

1ನೇ ವರ್ಷ: ರೂ. 17,000/-

2ನೇ ವರ್ಷ: ರೂ. 19,000/-

3ನೇ ವರ್ಷ: ರೂ. 21,000/-

ಅರ್ಜಿ ಶುಲ್ಕ:

ಅಂಗವಿಕಲ ಅಭ್ಯರ್ಥಿಗಳು: ಶೂನ್ಯ ಶುಲ್ಕ

ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು: ರೂ. 378 ಶುಲ್ಕ

ಸಾಮಾನ್ಯ/ಪ್ರವರ್ಗ -2ಎ/2ಬಿ/3ಎ & 3ಬಿ ಅಭ್ಯರ್ಥಿಗಳು: ರೂ. 614 ಶುಲ್ಕ ಕಟ್ಟಬೇಕು.

Also Read  ಕಂಕಣ ಭಾಗ್ಯ ಕೂಡಿ ಬರುತ್ತಿಲ್ಲವೇ? ಈ ರೀತಿ ಮಾಡಿದರೆ ಬೇಗ ಮದುವೆಯಾಗುತ್ತದೆ.

ಆಯ್ಕೆಯ ವಿಧಾನ:

ಅಭ್ಯರ್ಥಿಗಳಿಗೆ ಮೆರಿಟ್ ಪಟ್ಟಿ, ಕನ್ನಡ ಭಾಷಾ ಪರೀಕ್ಷೆ, ಆಪ್ಟಿಟ್ಯೂಡ್ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

error: Content is protected !!
Scroll to Top