ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಯುವಕವಿಗೋಷ್ಠಿ

(ನ್ಯೂಸ್ ಕಡಬ) newskadaba.com ಅ.16. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಕರ್ನಾಟಕ ಸಂಭ್ರಮ – 50ರ ಅಭಿಯಾನದ ಅಂಗವಾಗಿ ಬೆಂಗಳೂರು, ಮೈಸೂರು, ಬೆಳಗಾವಿ ಹಾಗೂ ಕಲಬುರಗಿ ವಿಭಾಗಗಳಲ್ಲಿ ವಿಭಾಗವಾರು `ಯುವಕವಿ ಗೋಷ್ಟಿ’ಗಳನ್ನು ಆಯೋಜಿಸಲಾಗಿದ್ದು, ಆಸಕ್ತ 20 ರಿಂದ 40 ವರ್ಷ ವಯಸ್ಸಿನ ಯುವಕವಿಗಳಿಂದ ಕವಿತೆಗಳನ್ನು ಆಹ್ವಾನಿಸಲಾಗಿದೆ.


ರಾಜ್ಯದ ಎಲ್ಲಾ ಭಾಗದ ಆಸಕ್ತ ಕವಿಗಳು ಕನಿಷ್ಠ 3 ಕವಿತೆಗಳನ್ನು ಕಳುಹಿಸಿಕೊಡಬಹುದು. ಕವಿತೆಗಳನ್ನು ಕಳುಹಿಸಲು ಅಕ್ಟೋಬರ್ 30 ಕೊನೆಯ ದಿನ. ಆಸಕ್ತ ಕವಿಗಳು ಕವಿತೆಗಳನ್ನು ಸಲ್ಲಿಸುವಾಗ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಜಾಲತಾಣ karnatakasahithyaacademy.org ಮೂಲಕ ಪಡೆದುಕೊಳ್ಳುವಂತೆ ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top