(ನ್ಯೂಸ್ ಕಡಬ) newskadaba.com ಮಂಗಳೂರು, ಅ. 16. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಹಾಗೂ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಉಳ್ಳಾಲದ ಮಂಜನಾಡಿಯ ಬದ್ರಿಯಾ ನಗರದ ನಿವಾಸಿ ಮೊಹಮ್ಮದ್ ಅಬ್ದುಲ್ ಫಯಾನ್(27) ಎಂದು ಗುರುತಿಸಲಾಗಿದೆ. ಆರೋಪಿಯ ವಿರುದ್ಧ ಕೊಣಾಜೆ, ಉಳ್ಳಾಲ, ಕಡಬ, ಬರ್ಕೆ, ಉಪ್ಪಿನಂಗಡಿ, ಪುತ್ತೂರು, ಬಂಟ್ವಾಳ ಪೊಲೀಸ್ ಠಾಣೆಗಳಲ್ಲಿ ಸುಮಾರು 24 ಪ್ರಕರಣಗಳು ದಾಖಲಾಗಿವೆ. ಆರೋಪಿಯ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಮಂಜೇಶ್ವರದಲ್ಲಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಇನ್ನು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಇದೀಗ ನ್ಯಾಯಾಂಗ ಬಂಧನ ವಿಧಿಸಲಾಗಿದೆ.