(ನ್ಯೂಸ್ ಕಡಬ) newskadaba.com ಅ.16. 14 ಅಂತಸ್ತಿನ ವಸತಿ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಮೂವರು ಮೃತಪಟ್ಟ ಘಟನೆ ಮುಂಬೈನ ಉನ್ನತ ಮಟ್ಟದ ಲೋಖಂಡವಾಲಾ ಕಾಂಪ್ಲೆಕ್ಸ್ ನಲ್ಲಿ ಸಂಭವಿಸಿದೆ.
ಮೃತಪಟ್ಟವರನ್ನು ಚಂದ್ರಪ್ರಕಾಶ್ ಸೋನಿ (74), ಕಾಂತಾ ಸೋನಿ (74) ಮತ್ತು ಪೆಲುಬೇಟ (42) ಎಂದು ಗುರುತಿಸಲಾಗಿದೆ. ಅಂಧೇರಿ ಪ್ರದೇಶದ ಲೋಖಂಡವಾಲಾ ಕಾಂಪ್ಲೆಕ್ಸ್ ನ 4 ನೇ ಅಡ್ಡ ರಸ್ತೆಯಲ್ಲಿರುವ ರಿಯಾ ಪ್ಯಾಲೇಸ್ ಕಟ್ಟಡದ 10ನೇ ಮಹಡಿಯಲ್ಲಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಮೂವರಿಗೆ ಗಾಯಗಳಾಗಿದ್ದು, ಕೂಪರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ.