(ನ್ಯೂಸ್ ಕಡಬ) newskadaba.com ಮಂಗಳೂರು, ಅ. 16. ಬಸ್ ನಿರ್ವಾಹಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಶವ ನೆಹರೂ ಮೈದಾನದ ಇಂದಿರಾ ಕ್ಯಾಂಟಿನ್ ಪರಿಸರದಲ್ಲಿ ಪತೆಯಾಗಿದೆ.
ಮೃತ ವ್ಯಕ್ತಿಯನ್ನು ಮಂಗಳೂರು-ವಿಟ್ಲ ಮಧ್ಯೆ ಸಂಚರಿಸುತ್ತಿದ್ದ ಫಲ್ಗುಣಿ, ಸೆಲಿನಾ ಬಸ್ಸುಗಳಲ್ಲಿ ನಿರ್ವಾಹಕನಾಗಿ ದುಡಿಯುತ್ತಿದ್ದ ರಾಜೇಶ್(30) ಎಂದು ಗುರುತಿಸಲಾಗಿದೆ. ಸೋಮವಾರ ಬೆಳಗ್ಗೆ ಇಂದಿರಾ ಕ್ಯಾಂಟೀನ್ ಪರಿಸರದಲ್ಲಿ ಅನಾಥ ಸ್ಥಿತಿಯಲ್ಲಿ ಕಂಡಕ್ಟರ್ ರಾಜೇಶನ ಜರ್ಜರಿತವಾದ ಮೃತದೇಹ ಪತ್ತೆಯಾಗಿತ್ತು. ಸ್ಥಳಕ್ಕಾಗಮಿಸಿದ ಪಾಂಡೇಶ್ವರ ಠಾಣಾ ಪೊಲೀಸರು ಮೃತದೇಹವನ್ನು ವಾರೀಸುದಾರರು ಯಾರೂ ಬಂದಿಲ್ಲದ ಕಾರಣ ವೆನ್ಲಾಕ್ ಶವಾಗಾರದಲ್ಲಿ ಇರಿಸಿದ್ದಾರೆ. ಮನೆಯವರು, ಸಂಬಂಧಿಕರು ಯಾರು, ಎಲ್ಲಿಯವರೆಂಬ ಬಗ್ಗೆ ಈವರೆಗೂ ಮಾಹಿತಿ ಲಭ್ಯವಾಗಿಲ್ಲ.