ಆಟೋ ರಿಕ್ಷಾದಲ್ಲಿ ಅಕ್ರಮ ದನ ಸಾಗಾಟ – ತಡೆಹಿಡಿದ ಬಜರಂಗದಳ ಕಾರ್ಯಕರ್ತರು

crime, arrest, suspected

(ನ್ಯೂಸ್ ಕಡಬ) newskadaba.com ಅ. 16. ಅಕ್ರಮವಾಗಿ ಆಟೋ ರಿಕ್ಷಾದಲ್ಲಿ ಗೋ ಸಾಗಾಟ ಮಾಡುತ್ತಿದ್ದನ್ನು ಬಜರಂಗದಳ ಕಾರ್ಯಕರ್ತರು ತಡೆಹಿಡಿದ ಘಟನೆ ಪುತ್ತೂರು ಬೈಪಾಸ್ ರಸ್ತೆಯಲ್ಲಿ ನಡೆದಿದೆ.

ಬುಧವಾರದಂದು ಮಧ್ಯಾಹ್ನ ದರ್ಬೆಯಿಂದ ನೆಹರೂನಗರ ಕಡೆಗೆ ಬೈಪಾಸ್ ರಸ್ತೆಯಲ್ಲಿ ತೆರಳುತ್ತಿದ್ದ ರಿಕ್ಷಾದಲ್ಲಿ ದನವೊಂದನ್ನು ಸಾಗಾಟ ಮಾಡಲಾಗುತ್ತಿರುವ ಬಗ್ಗೆ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರಿಕ್ಷಾದಲ್ಲಿ ಇಬ್ಬರು ಮಹಿಳೆಯರಿದ್ದರು ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Scroll to Top