ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯ ದಾಖಲೆ ಮುರಿದ ಕೊಹ್ಲಿ



(ನ್ಯೂಸ್ ಕಡಬ) newskadaba.com  ಬೆಂಗಳೂರು, ಅ. 17. ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿರಾಟ್ ಕೊಹ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ದಾಖಲೆ ಮಾಡುವುದರೊಂದಿಗೆ ಕಿಂಗ್ ಕೊಹ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯ ದಾಖಲೆ ಮುರಿದಿದ್ದಾರೆ.





ಟೀಮ್ ಇಂಡಿಯಾ ಪರ ಅತೀ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ಆಟಗಾರರ ಪಟ್ಟಿಯಲ್ಲಿ ಇದೀಗ ವಿರಾಟ್ ಕೊಹ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಮಹೇಂದ್ರ ಸಿಂಗ್ ಧೋನಿಯ ಹೆಸರಿನಲ್ಲಿತ್ತು ಎನ್ನಲಾಗಿದೆ. ಈ ಮೂಲಕ ಭಾರತದ ಪರ ಅತ್ಯಧಿಕ ಇಂಟರ್​ನ್ಯಾಷನಲ್ ಮ್ಯಾಚ್​ಗಳನ್ನು ಆಡಿದ 2ನೇ ಆಟಗಾರ ಎಂಬ ದಾಖಲೆ ಬರೆದಿದ್ದಾರೆ ವಿರಾಟ್ ಕೊಹ್ಲಿ.






 

error: Content is protected !!
Scroll to Top