ತೂಗು ಸೇತುವೆಯ ರೋಪ್ ತುಂಡಾಗಿ ಬಿದ್ದು ಮೂವರು ಗಾಯ



(ನ್ಯೂಸ್ ಕಡಬ) newskadaba.com ಸುಳ್ಯ, ಅ.18. ಅರಂತೋಡು ಸಮೀಪದ ಅರಮನೆಯ ಶಿಥಿಲಗೊಂಡ ತೂಗು ಸೇತುವೆಯ ರೋಪ್ ತುಂಡಾಗಿ ಬಿದ್ದ ಪರಿಣಾಮ ಮೂವರು ಗಾಯಗೊಂಡ ಘಟನೆ ಗುರುವಾರ ತಡರಾತ್ರಿ ನಡೆದಿದೆ.







ಕುಸುಮಾಧರ ಉಳುವಾರು, ಚಂದ್ರಶೇಖರ ಕೊಂಪುಳಿ ಮತ್ತು ತೇಜಕುಮಾರ್ ಗಾಯಾಳುಗಳು. ರಾತ್ರಿ ಮರ್ಕಂಜದಲ್ಲಿ ಕೆಲಸ ಮುಗಿಸಿ ಅರಮನೆಗಯದ ತೂಗು ಸೇತುವೆಯ ಮೇಲೆ ಮೂವರು ಹೋಗುತ್ತಿದ್ದ ವೇಳೆ ರೋಪ್ ತುಂಡಾಗಿದೆ. ಮೂವರನ್ನು ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.






 

error: Content is protected !!
Scroll to Top