ನಟ ದರ್ಶನ್‌ಗೆ ಎದುರಾದ ಮತ್ತೊಂದು ಸಂಕಷ್ಟ: ಹಳೆ ಪ್ರಕರಣಕ್ಕೆ ಮರು ಜೀವ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.18. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದು, ಬೆದರಿಕೆ ವಿಚಾರವಾಗಿ ನಿರ್ಮಾಪಕ ದಾಖಲಿಸಿದ್ದ ಕೇಸ್ ಇದೀಗ ಮರುಜೀವ ಪಡೆದುಕೊಂಡಿದೆ.

ಕೆಲ ವರ್ಷಗಳ ಹಿಂದೆ ದರ್ಶನ್, ಯುವ ನಿರ್ಮಾಪಕ ಭರತ್ ಅವರಿಗೆ ಬೆದರಿಕೆ ಹಾಕಿದ್ದ ಆರೋಪದ ಮೇಲೆ ದೂರು ದಾಖಲಾಗಿತ್ತು. ಇದೀಗ 2022ರಲ್ಲಿ ದಾಖಲಾಗಿದ್ದ ಈ ಪ್ರಕರಣಕ್ಕೆ ಮತ್ತೆ ಮರು ಜೀವ ಸಿಕ್ಕಂತಾಗಿದೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣದ ಕುರಿತಾಗಿ ಹೊಸದಾಗಿ ಎನ್‌ಸಿಆರ್ ದಾಖಲಾಗಿದ್ದು, ತನಿಖೆ ನಡೆಯುವ ಸಾಧ್ಯತೆ ಇದೆ. ಬಳಿಕ ಭರತ್ ಅವರು ತಮಗೆ ಕರೆ ಮಾಡಿ ದರ್ಶನ್ ಬೆದರಿಕೆ ಹಾಕಿದ್ದಾರೆ ಎಂದು ದೂರು ದಾಖಲಿಸಿದ್ದರು. ಅದಕ್ಕೆ ಸಂಬಂಧಿಸಿದಂತೆ ಕರೆ ಮಾಹಿತಿ, ಕಾಲ್ ರೆಕಾರ್ಡ್​ಗಳನ್ನು ಸಹ ಆಗ ಮಾಧ್ಯಮಗಳ ಮುಂದೆ ಬಿಡುಗಡೆ ಮಾಡಿದ್ದರು.

Also Read  ಮಂಗಳೂರು: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

 

error: Content is protected !!
Scroll to Top