ಇಂದಿನಿಂದ ಬೆಂಗಳೂರಿನಲ್ಲಿ ಕರ್ನಾಟಕ vs ಕೇರಳ ರಣಜಿ ಫೈಟ್

(ನ್ಯೂಸ್ ಕಡಬ) newskadaba.com .18, ಬೆಂಗಳೂರು. ಈ ಬಾರಿ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ‌ ಮೊದಲ ಗೆಲುವು ದಾಖಲಿಸುವ ನಿರೀಕ್ಷೆಯಲ್ಲಿರುವ ಕರ್ನಾಟಕ ತಂಡ ಶುಕ್ರವಾರದಿಂದ ಕೇರಳ ವಿರುದ್ಧ ಕಣಕ್ಕಿಳಿಯಲಿದೆ. ಪಂದ್ಯಕ್ಕೆ ನಗರದ ಹೊರವಲಯದ ಆಲೂರು ಕೆ‌ಎಸ್‌ಸಿಎ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ಮಳೆಯಿಂದ ಮೈದಾನ ಕೊಂಚ ಒದ್ದೆಯಾಗಿರುವುದರಿಂದ ಟಾಸ್ ಕೊಂಚ ತಡವಾಗಲಿದೆ.

ಕಳೆದ ವಾರ ಇಂದೋರ್‌ನಲ್ಲಿ ನಡೆದಿದ್ದ ಮಧ್ಯಪ್ರದೇಶ ವಿರುದ್ಧದ ಪಂದ್ಯದಲ್ಲಿ ಮಯಾಂಕ್ ಅಗರ್‌ವಾಲ್ ನಾಯಕತ್ವದ ಕರ್ನಾಟಕ ಡ್ರಾಗೆ ತೃಪ್ತಿಪಟ್ಟುಕೊಂಡಿತ್ತು. ಮಳೆಯಿಂದಾಗಿ ಇತ್ತಂಡಗಳ ಮೊದಲ ಇನ್ನಿಂಗ್ಸ್ ಕೂಡ ಮುಗಿದಿರಲಿಲ್ಲ. ಹೀಗಾಗಿ ತಲಾ 1 ಅಂಕ ಹಂಚಿಕೊಂಡಿದ್ದವು. ಅತ್ತ ಕೇರಳ ತಂಡ ಆರಂಭಿಕ‌ ಪಂದ್ಯದಲ್ಲಿ ಪಂಜಾಬ್ ವಿರುದ್ಧ 8 ವಿಕೆಟ್‌ನಿಂದ ಗೆಲುವು ಸಾಧಿಸಿತ್ತು. ಈ ಬಾರಿ ತಂಡಕ್ಕೆ ಸಂಜು ಸ್ಯಾಮ್ಸನ್‌ ಉಪಸ್ಥಿತಿ ಬಲ ಒದಗಿಸಲಿದ್ದು, ಸತತ 2ನೇ ಗೆಲುವಿನ ಕಾತರದಲ್ಲಿದೆ.

Also Read  ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಮಟ್ಟದ ಮಹಿಳಾ ಕ್ರೀಡಾಕೂಟ

error: Content is protected !!
Scroll to Top