(ನ್ಯೂಸ್ ಕಡಬ) newskadaba.com ಅ.18, ಬೆಂಗಳೂರು: ʼಬೆಂಗಳೂರಿನ ಭಾಗವಾಗಿ ತುಮಕೂರು ಬೆಳೆಯುತ್ತಿದ್ದು, ವಿಮಾನ ನಿಲ್ದಾಣ ಮಾಡಿದರೆ ಅನುಕೂಲವಾಗಲಿದೆʼ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಹೇಳಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 20 ಸಾವಿರ ಎಕರೆ ಜಾಗದಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ತುಮಕೂರಿನಲ್ಲಿ ನಿರ್ಮಾಣವಾಗುತ್ತಿದೆ. ಮೊದಲ ಮತ್ತು ಎರಡನೇ ಹಂತದ ಕಾಮಗಾರಿ ಮುಗಿದಿದೆ. 150 ಕೈಗಾರಿಕೆಗಳು ಹಾಗೂ ಜಪಾನ್ ಟೌನ್ಶಿಪ್ ಬರುತ್ತಿದೆ. ಎಚ್ಎಎಲ್ ಹೆಲಿಕ್ಯಾಪ್ಟರ್ ಫ್ಯಾಕ್ಟರಿ ಕೆಲಸ ಆರಂಭಿಸಿದೆ. ಇನ್ನೂ ಹಲವು ದೊಡ್ಡ ಕೈಗಾರಿಕೆಗಳಇದನ್ನೆಲ್ಲ ಗಮನದಲ್ಲಿಟ್ಟುಕೊಂಡು ವಿಮಾನ ನಿಲ್ದಾಣ ಮಾಡಿದರೆ ಉತ್ತಮ ಎಂಬುದನ್ನು ತಿಳಿಸಲಾಗಿದೆʼ ಎಂದರು.
ʼಮುಂದಿನ ದಿನಗಳಲ್ಲಿ ತುಮಕೂರು ಅಭಿವೃದ್ಧಿಗೆ ಬೇರೆ ಬೇರೆ ಹೊಸ ಯೋಜನೆಗಳನ್ನು ಇಟ್ಟುಕೊಳ್ಳಲಾಗಿದೆ. ತುಮಕೂರು ಬೆಂಗಳೂರಿನ ಒಂದು ಭಾಗವಾಗಿ ಬೆಳೆಯುತ್ತಿದ್ದು, ಗ್ರೇಟರ್ ಬೆಂಗಳೂರು ಎಂದುಪರಿಗಣಿಸುವಂತೆ ಕೇಳಿಕೊಳ್ಳಲಾಗಿದೆ. ನೆಲಮಂಗಲ, ದಾಬಸ್ ಪೇಟೆವರೆಗೆ ಬೆಂಗಳೂರು ಬೆಳೆದಿದೆ. ತುಮಕೂರಿನವರೆಗೆ ಮೆಟ್ರೋ ರೈಲು ವಿಸ್ತರಣೆಗೂ ಪ್ರಸ್ತಾವನೆ ಸಲ್ಲಿಸಲಾಗಿದೆ. ತುಮಕೂರನ್ನು ಗ್ರೇಟರ್ ಬೆಂಗಳೂರು ಎಂದು ಕರೆಯಬಹುದು. ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದುʼ ಎಂದು ತಿಳಿಸಿದರು.