ಎಡಮಂಗಲ: ಬೈಕ್ ಸ್ಕಿಡ್ ಆಗಿ ಪಲ್ಟಿ ► ಬೈಕ್ ಸವಾರನಿಗೆ ಗಾಯ



(ನ್ಯೂಸ್ ಕಡಬ) newskadaba.com ಕಡಬ, ಮಾ.17. ಬೈಕೊಂದು ಸ್ಕಿಡ್ ಆಗಿ ಉರುಳಿ ಬಿದ್ದ ಪರಿಣಾಮ ಸವಾರ ಗಾಯಗೊಂಡ ಘಟನೆ ಕಡಬ ಸಮೀಪದ ಎಡಮಂಗಲ ಎಂಬಲ್ಲಿ ಶನಿವಾರದಂದು ನಡೆದಿದೆ.







ಗಾಯಾಳುವನ್ನು ಬೈಕ್ ಸವಾರ ನಿಂತಿಕಲ್ ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್(19) ಎಂದು ಗುರುತಿಸಲಾಗಿದೆ. ಈತ ಚಲಾಯಿಸುತ್ತಿದ್ದ ಬೈಕ್ ಎಡಮಂಗಲ ದೇವಸ್ಥಾನದ ಸಮೀಪ ಸ್ಕಿಡ್ ಆಗಿ ಬಿದ್ದಿದ್ದು, ಗಾಯಗೊಂಡ ಪ್ರಜ್ವಲ್ ನನ್ನು ಕಡಬದ 108 ಆಂಬ್ಯುಲೆನ್ಸ್ ಮೂಲಕ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.






error: Content is protected !!
Scroll to Top