ಬಾಲ್ಯ ವಿವಾಹ ನಿಷೇಧ ಎಲ್ಲಾ ಧರ್ಮಕ್ಕೆ ಅನ್ವಯ- ಸುಪ್ರೀಂಕೋರ್ಟ್

(ನ್ಯೂಸ್ ಕಡಬ) newskadaba.com .19, ನವದೆಹಲಿ:  ‘ಬಾಲ್ಯ ವಿವಾಹ ನಿಷೇಧ ಕಾಯ್ದೆಯನ್ನು ಯಾವುದೇ ಧರ್ಮದ ವೈಯಕ್ತಿಕ ಕಾನೂನಿನ ಅಡಿಯ ಸಂಪ್ರದಾಯಗಳನ್ನು ಮುಂದಿಟ್ಟು ಕೊಂಡು ಚಿವುಟಿ ಹಾಕಲು ಆಗದು’ ಎಂದು ಮಹತ್ವದ ಆದೇಶ ಪ್ರಕಟಿಸಿರುವ ಸುಪ್ರೀಂ ಕೋರ್ಟ್, ‘ಚಿಕ್ಕ ಮಕ್ಕಳಿಗೆ ವಿವಾಹ ಮಾಡಿದರೆ ಅವರು ತಮ್ಮ ಜೀವನ ಸಂಗಾತಿ ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯ ಮೊಟಕು ಗೊಳಿಸಿದಂತೆ’ ಎಂದಿದೆ.

ಈ ಮೂಲಕ ಬಾಲ್ಯ ವಿವಾಹ ನಿಷೇಧ ಕಾಯ್ದೆ ಎಲ್ಲಾ ಧರ್ಮಗಳಿಗೂ ಅನ್ವಯಿಸುತ್ತದೆ ಎಂದು ಸ್ಪಷ್ಟವಾಗಿ ಹೇಳಿದೆ. ದೇಶದಲ್ಲಿ ಏಕರೂಪದ ನಾಗರಿಕ ಸಂಹಿತೆ ಜಾರಿಗೊಳಿಸುವ ಕೇಂದ್ರ ಸರ್ಕಾರದ ಪ್ರಯತ್ನಕ್ಕೆ ಪೂರಕವಾಗಿ ಈ ಆದೇಶ ಹೊರಬಿದ್ದಿದೆ.

Also Read  ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಮೊಬೈಲ್ ಟವರ್ ನೀತಿ ಜಾರಿ➤ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್

 

error: Content is protected !!
Scroll to Top