ದೀಪಾವಳಿ ಹಬ್ಬದ ಪ್ರಯುಕ್ತ ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ



(ನ್ಯೂಸ್ ಕಡಬ) newskadaba.com ಮಂಗಳೂರು, ಅ. 19. ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ಮನವಿಗೆ ತುರ್ತು ಸ್ಪಂದಿಸಿರುವ ರೈಲ್ವೆ ಸಚಿವರಾದ ಅಶ್ವಿನ್‌ ವೈಷ್ಣವ್‌ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ಸ್ಪಂದಿಸಿದ್ದು, ಇದೀಗ ನೈರುತ್ಯ ರೈಲ್ವೆಯು ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ ಆರಂಭಿಸಿದೆ.







ಅದರಂತೆ ಯಶವಂತಪುರ-ಮಂಗಳೂರು(06565) ವಿಶೇಷ ರೈಲು ಅ.30ರಂದು ರಾತ್ರಿ 11.50ಕ್ಕೆ ಯಶವಂತಪುರದಿಂದ ಹೊರಟು ಮರುದಿನ ಬೆಳಗ್ಗೆ 11.45ಕ್ಕೆ ಮಂಗಳೂರು ತಲುಪಲಿದೆ. ಹಾಗೆಯೇ ಮಂಗಳೂರು-ಯಶವಂತಪುರ(ನಂ. 06566) ವಿಶೇಷ ರೈಲು ಮಂಗಳೂರಿನಿಂದ ಅ.31ರಂದು ಮಧ್ಯಾಹ್ನ 1 ಗಂಟೆಗೆ ಹೊರಟು ಅದೇ ದಿನ ರಾತ್ರಿ 9.15ಕ್ಕೆ ಯಶವಂತಪುರ ತಲುಪಲಿದೆ.






 

 

error: Content is protected !!
Scroll to Top