ಇಂದು ಒಂದೇ ದಿನದಲ್ಲಿ ಬರೋಬ್ಬರಿ 20 ವಿಮಾನಗಳಿಗೆ ಬಾಂಬ್ ಬೆದರಿಕೆ!

(ನ್ಯೂಸ್ ಕಡಬ) newskadaba.com .19 ನವದೆಹಲಿ:  ಭಾರತೀಯ ವಿಮಾನಯಾನ ಸಂಸ್ಥೆಗಳ ಸುಮಾರು 20 ವಿಮಾನಗಳಿಗೆ ಇಂದು ಬಾಂಬ್‌ ಬೆದರಿಕೆಗಳು ಬಂದಿವೆ ಎಂದು ಮೂಲಗಳು ತಿಳಿಸಿವೆ.

ಇಂದು ಬೆಳಗ್ಗೆಯಿಂದ ಇಲ್ಲಿಯವರಿಗೆ ಏರ್ ಇಂಡಿಯಾ, ಇಂಡಿಗೋ, ಆಕಾಶ ಏರ್, ವಿಸ್ತಾರಾ, ಸ್ಪೈಸ್ ಜೆಟ್, ಸ್ಟಾರ್ ಏರ್ ಮತ್ತು ಅಲಯನ್ಸ್ ಏರ್ ವಿಮಾನ ಸೇರಿದಂತೆ 20 ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಇಂಡಿಗೋದ ದೆಹಲಿ ಮತ್ತು ಮುಂಬೈನಿಂದ ಇಸ್ತಾನ್‌ಬುಲ್‌ಗೆ ಹಾಗೂ ಜೋಧ್‌ಪುರದಿಂದ ದೆಹಲಿಗೆ ಮತ್ತು ಉದಯಪುರದಿಂದ ಮುಂಬೈ ವಿಸ್ತಾರಾ ವಿಮಾನಗಳಿಗೂ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ.ವಿಮಾನಯಾನ ಸಂಸ್ಥೆಯು ಸಂಬಂಧಿತ ಅಧಿಕಾರಿಗಳೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಮಾರ್ಗಸೂಚಿಗಳ ಪ್ರಕಾರ ಎಲ್ಲಾ ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಇಂಡಿಗೋ ತಿಳಿಸಿದೆ.

Also Read  ಕರ್ನಾಟಕ (ಸರ್ಕಾರಿ) ಪಾಲಿಟೆಕ್ನಿಕ್, ಮಂಗಳೂರು ➤ ಡಿಪ್ಲೊಮಾ ಆಫ್-ಲೈನ್ ಮುಖಾಂತರ ಅರ್ಜಿ ಆಹ್ವಾನ

error: Content is protected !!
Scroll to Top