ವಿಶ್ವ ಅಯೋಡಿನ್ ಕೊರತೆಯ ನ್ಯೂನ್ಯತೆಗಳ ನಿಯಂತ್ರಣ ದಿನ

(ನ್ಯೂಸ್ ಕಡಬ) newskadaba.com ಅ. 21. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣ ಘಟಕ ಹಾಗೂ ಪದುವಾ ಪ್ರೌಢಶಾಲೆ ನಂತೂರು ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ವಿಶ್ವ ಅಯೋಡಿನ್ ಕೊರತೆಯ ನ್ಯೂನ್ಯತೆಗಳ ನಿಯಂತ್ರಣ ದಿನ ಕಾರ್ಯಕ್ರಮವನ್ನು ಅಕ್ಟೋಬರ್ 21 ರಂದು ಬೆಳಿಗ್ಗೆ 10 ಗಂಟೆಗೆ ಪದುವಾ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.


ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಉದ್ಘಾಟಿಸಲಿದ್ದು, ಪದುವಾ ಸಮೂಹ ಶಿಕ್ಷಣ ಸಂಸ್ಥೆಯ ನಿರ್ದೇಶಕ ಫಾದರ್ ಅರುಣ್ ವಿಲ್ಸನ್ ಲೋಬೋ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ್. ಕೆ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.

Also Read  ಗೋಳಿತ್ತಡಿ - ಏಣಿತ್ತಡ್ಕ ನೂತನ ರಸ್ತೆಯಲ್ಲಿ ಮೊದಲ ಅಪಘಾತ ► ದ್ವಿಚಕ್ರ ವಾಹನ ಸವಾರನಿಗೆ ಗಾಯ

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯ ಪಾಲಿಟಿವ್ ಕೇರ್ ವಿಭಾಗ ಹಿರಿಯ ವೈದ್ಯಾಧಿಕಾರಿ ಡಾ.ಅಣ್ಣಯ್ಯ ಕುಲಾಲ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.

error: Content is protected !!
Scroll to Top