ವಿಧಾನಪರಿಷತ್ ಚುನಾವಣೆ- ಯುಟಿ ಖಾದರ್, ಬ್ರಿಜೇಶ್ ಚೌಟ, ಭರತ್ ಶೆಟ್ಟಿ ಮತದಾನ

(ನ್ಯೂಸ್ ಕಡಬ) newskadaba.com ಅ. 21. ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾಗಿದ್ದ ಎಂಎಲ್‌ಸಿ ಸ್ಥಾನಕ್ಕೆ ಸ್ಪೀಕರ್ ಯುಟಿ ಖಾದರ್, ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಅವರು ಮತದಾನ ಮಾಡಿದ್ದಾರೆ.

ಸ್ಪೀಕರ್ ಯು.ಟಿ. ಖಾದರ್ ಅವರು ಉಳ್ಳಾಲ ನಗರಸಭೆಯಲ್ಲಿ ಮತದಾನ ಮಾಡಿದ್ದಾರೆ. ಮಂಗಳೂರು ಮಹಾ ನಗರ ಪಾಲಿಕೆಯಲ್ಲಿ ಸಂಸದ ಬ್ರಿಜೇಶ್, ಶಾಸಕ ಭರತ್ ಶೆಟ್ಟಿ ಹಾಗೂ ಮಹಾನಗರಪಾಲಿಕೆ ಸದಸ್ಯರು ಮತ ಚಲಾಯಿಸಿದ್ದಾರೆ. ಇನ್ನು ವಿಧಾನ ಪರಿಷತ್ ಉಪಚುನಾವಣೆಗೂ ಮುನ್ನ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಮತಗಟ್ಟೆಗಳಿಗೆ ತೆರಳಿ ಪರಿಶೀಲನೆ ನಡೆಸಿದರು.

Scroll to Top