ಮುಂಬೈ: 3.8 ತೀವ್ರತೆಯ ಭೂಕಂಪ

(ನ್ಯೂಸ್ ಕಡಬ) newskadaba.com .21 ಮುಂಬೈ: ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಮಂಗಳವಾರ  ಬೆಳಗ್ಗೆ 3.8 ತೀವ್ರತೆಯ ಭೂಕಂಪ ಸಂಭವಿಸಿದೆ. ಈ ಬಗ್ಗೆ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ನೀಡಿದ್ದು, ಬೆಳಗ್ಗೆ 6:52ಕ್ಕೆ ಭೂಮಿ ಕಂಪಿಸಿದೆ.ಭೂಕಂಪದ ಕೇಂದ್ರಬಿಂದುವು 19.38° ಉತ್ತರ ಅಕ್ಷಾಂಶ ಮತ್ತು 77.46° ಪೂರ್ವ ರೇಖಾಂಶದಲ್ಲಿ 5 ಕಿಮೀ ಆಳದಲ್ಲಿದೆ ಎಂದು ಹೇಳಿದ್ದಾರೆ.

EQ ಆಫ್ M: 3.8, ರಂದು: 22/10/2024 06:52:40 IST, ಲ್ಯಾಟ್: 19.38 N, ಉದ್ದ: 77.46 E, ಆಳ: 5 ಕಿಮೀ, ಸ್ಥಳ: ನಾಂದೇಡ್, ಮಹಾರಾಷ್ಟ್ರ, ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ. ಇನ್ನು ಭೂಕಂಪದಿಂದಾಗಿ ಯಾವುದೇ ಹಾನಿ ಸಂಭವಿಸಿಲ್ಲ ಎನ್ನಲಾಗಿದೆ.ಇನ್ನು ಕಳೆದ ತಿಂಗಳಷ್ಟೇ ಉತ್ತರ ಭಾರತ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಹಲವೆಡೆ ಭೂಕಂಪ ಸಂಭವಿಸಿತ್ತು. ಭಾರತದ ದೆಹಲಿ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ಜಮ್ಮು ಮತ್ತು ಕಾಶ್ಮೀರ, ಪಾಕಿಸ್ತಾನದ ಪೇಶಾವರ, ಇಸ್ಲಾಮಾಬಾದ್ ಮತ್ತು ಲಾಹೋರ್ ಹಾಗೂ ಅಫ್ಘಾನಿಸ್ತಾನದಲ್ಲಿ ಭೂಕಂಪವಾಗಿತ್ತು. ಪಾಕಿಸ್ತಾನದಲ್ಲಿ ರಿಕ್ಟರ್‌ ಮಾಪಕದಲ್ಲಿ 5.8 ತೀವ್ರತೆ ಸೂಚಿಸುವ ಭೂಕಂಪ ಸಂಭವಿಸಿದೆ ಎಂದು ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸ್ ತಿಳಿಸಿದೆ. ಭೂಕಂಪವು 10 ಕಿಲೋಮೀಟರ್ (6.21 ಮೈಲಿ) ಆಳದಲ್ಲಿತ್ತು ಎಂದು ಜಿಎಫ್‌ಝೆಡ್‌ ಹೇಳಿತ್ತು.

error: Content is protected !!

Join the Group

Join WhatsApp Group