ಉಡುಪಿ: ಯುವಕನ ಕತ್ತು ಸೀಳಿ ಹತ್ಯೆ

(ನ್ಯೂಸ್ ಕಡಬ) newskadaba.com .21 ಉಡುಪಿ:  ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಗೊಬ್ಬ  ತನ್ನ ಸ್ನೇಹಿತನನ್ನೇ ಕತ್ತು ಸೀಳಿ ಕೊಲೆಗೈದ ಘಟನೆ ಉಡುಪಿ ಹಳೆ ಕೆಎಸ್ಸಾರ್ಟಿಸಿ ನಿಲ್ದಾಣದ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.

ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ(32) ಕೊಲೆಯಾದ ವ್ಯಕ್ತಿ. ಈತನ ಸ್ನೇಹಿತ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ನಿವಾಸಿ ಈರಣ್ಣ ಯಾನೆ ದಿನೇಶ್ ಕೊಲೆ ಆರೋಪಿ . ವಿಪರೀತ ಮದ್ಯಪಾನ ಮಾಡಿದ್ದರೆನ್ನಲಾದ ಇವರಿಬ್ಬರು ಇಂದು ಬೆಳಗ್ಗೆ ಜಗಳ ಮಾಡಿಕೊಂಡಿದ್ದಾರೆ. ಗಲಾಟೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಆರೋಪಿ ಈರಣ್ಣ ಹರಿತವಾದ ಚೂರಿಯಿಂದ ಪ್ರಶಾಂತ್ ರವರ ಕತ್ತು ಸೀಳಿದ್ದಾನೆ. ಗಂಭೀರವಾಗಿ ಗಾಯಗೊಂಡ ಪ್ರಶಾಂತ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

Also Read  ತುಳಸಿ ಗಿಡದಲ್ಲಿ ಅರಳುತ್ತಿವೆ ದಾಸವಾಳ ಹೂವುಗಳು..!

error: Content is protected !!
Scroll to Top