ಕೆರೆಯಲ್ಲಿ ಮುಳುಗಿ ಇಬ್ಬರು ಮಕ್ಕಳು ಮೃತ್ಯು: ಬಾಲಕನ ಮೃತದೇಹ ಪತ್ತೆ

Death, deadbody, Waterfall

(ನ್ಯೂಸ್ ಕಡಬ) newskadaba.com  ಬೆಂಗಳೂರು, ಅ. 22. ರಾಜಧಾನಿ ಬೆಂಗಳೂರಿನಲ್ಲಿ ಕೆಲವುದಿನಗಳಿಂದ ನಿರಂತರವಾಗಿ ಮೆಳೆಯಾಗುತ್ತಿದ್ದು, ಈ ಮಧ್ಯೆ ನಗರದ ಕೆಂಗೇರಿ ಕೆರೆಯಲ್ಲಿ ಇಬ್ಬರು ಮಕ್ಕಳು ಮುಳುಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಮೃತ ಮಕ್ಕಳನ್ನು ಶ್ರೀನಿವಾಸ್ (ಜಾನ್ ಸೀನಾ) (15) ಮತ್ತು‌ ಮಹಾಲಕ್ಷ್ಮೀ (13)‌ ಎಂದು‌ ಗುರುತಿಸಲಾಗಿದೆ. ಸೋಮವಾರ(ಅ.22) ಸಂಜೆ ಈ ದುರ್ಘಟನೆ‌ ನಡೆದಿದ್ದು, ಮೃತ ಮಕ್ಕಳ ತಾಯಿ ಬಿಬಿಎಂಪಿ ಪೌರಕಾರ್ಮಿಕರಾಗಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗಷ್ಟೇ ಕೆಂಗೇರಿ ಸಮೀಪದ ಹರ್ಷ ಲೇಔಟ್ ಗೆ ಬಂದು ನೆಲೆಸಿದ್ದು, ಕೆಲಸದ ನಿಮಿತ್ತ ತಾಯಿ‌ ಹೊರ ಹೋಗಿದ್ದರು. ಸೋಮವಾರ ಸಂಜೆ ಬಟ್ಟೆ ಒಗೆಯಲು ಹೋಗಿದ್ದ ಅಣ್ಣ, ತಂಗಿ ಕಾಲು ಜಾರಿ ಕೆರೆಗೆ ಬಿದ್ದಿದ್ದಾರೆ. ಇಂದು ಅಗ್ನಿಶಾಮಕ ದಳ ಸಿಬ್ಬಂದಿ ಮತ್ತೆ ಶೋಧ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಮೃತ ಬಾಲಕನ ಮೃತದೇಹ ಪತ್ತೆಯಾಗಿದೆ. ಮಹಾಲಕ್ಷ್ಮಿಗಾಗಿ ಇನ್ನೂ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.

 

Scroll to Top