ನರ್ಸ್ ಮೆಂಟರ್ ಹುದ್ದೆ; ರಾಜ್ಯ ಸರಕಾರದಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 22. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (Karnataka Health Promotion Trust) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಈ ಮೂಲಕ ರಾಜ್ಯ ಸರಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ. ಒಟ್ಟು 8 ನರ್ಸ್‌ ಮೆಂಟರ್‌ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅಪ್ಲೈ ಮಾಡುವ ಅಭ್ಯರ್ಥಿಗಳು ಅಪ್ಲಿಕೇಶನ್ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಚಿತ್ರದುರ್ಗದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಕ್ಟೋಬರ್‌ 28, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ ಈ ಕೆಳಗಿನಂತಿದೆ.

Also Read  ಸೆ: 18ರಂದು ಕಡಬದಲ್ಲಿ ಲೋಕಾಯುಕ್ತ ಅಹವಾಲು ಸ್ವೀಕಾರ

 

ವಿದ್ಯಾರ್ಹತೆ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿ.ಎಸ್ಸಿ, ನರ್ಸಿಂಗ್‌ನಲ್ಲಿ ಎಂ.ಎಸ್ಸಿ, ಜಿಎನ್‌ಎಂ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸನ್ನು ನಿಗದಿಪಡಿಸಿಲ್ಲ. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ವೇತನ ನಿಗದಿಪಡಿಸಿಲ್ಲ.

ಉದ್ಯೋಗದ ಸ್ಥಳ:
ಚಿತ್ರದುರ್ಗ

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಆಯ್ಕೆ ಪ್ರಕ್ರಿಯೆ:
ಶಾರ್ಟ್‌ ಲಿಸ್ಟಿಂಗ್
ಸಂದರ್ಶನ

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು https://www.khpt.org/work-with-us/vacancies-form/ ಈ ಲಿಂಕ್ ಮೂಲಕ ಆನ್‌ ಲೈನ್‌ ನಲ್ಲಿ ಅಪ್ಲೈ ಮಾಡಬೇಕು.

 

Also Read  ➤ ಬೆಂಗಳೂರು ಮೆಟ್ರೋದಲ್ಲಿ ಟ್ರೈನ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 17/10/2024
ಅರ್ಜಿ ಸಲ್ಲಿಸಲು ಕೊನೆಯ ದಿನ: ಅಕ್ಟೋಬರ್‌ 28, 2024

error: Content is protected !!
Scroll to Top