ಆರೋಪಿ ರಾಣಾ ಬಾರತಕ್ಕೆ ಹಸ್ತಾಂತರ ಸಾಧ್ಯತೆ.!

(ನ್ಯೂಸ್ ಕಡಬ) newskadaba.com ಅ. 22. ಮುಂಬೈ ದಾಳಿ ಆರೋಪಿ, ಕೆನಡಾ-ಪಾಕಿಸ್ತಾನಿ ಪ್ರಜೆ ತಹವ್ವುರ್ ರಾಣಾ ಎಂಬಾತನನ್ನು ಈ ವರ್ಷದ ಕೊನೆಗೆ ಭಾರತಕ್ಕೆ ಹಸ್ತಾಂತರಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ದೆಹಲಿಯ ಯುಎಸ್ ರಾಯಭಾರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಎರಡೂ ದೇಶಗಳ ಕೇಂದ್ರ ತನಿಖಾ ಸಂಸ್ಥೆಗಳು ಮತ್ತು ಕಾನೂನು ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು. ಸುಮಾರು 3 ಗಂಟೆಗಳ ಕಾಲ ನಡೆದ ಈ ಸಭೆಯಲ್ಲಿ ರಾಣಾ ಹಸ್ತಾಂತರದ ಕುರಿತು ಚರ್ಚೆ ನಡೆಸಲಾಯಿತು ಎನ್ನಲಾಗಿದೆ. ಈ ಸಭೆಯಲ್ಲಿ ರಾಣಾ ಹಸ್ತಾಂತರಕ್ಕೆ ಭಾರತ ಸರ್ಕಾರದ ಸಿದ್ಧತೆಗಳ ಬಗ್ಗೆಯೂ ಚರ್ಚಿಸಲಾಯಿತು. ಜೊತೆಗೆ ರಾಣಾ ಜೈಲಿಗೆ ಬಂದ ನಂತರದ ವ್ಯವಸ್ಥೆಗಳ ಬಗ್ಗೆಯೂ ಚರ್ಚೆ ನಡೆಸಲಾಯಿತು ಎಂದು ತಿಳಿದುಬಂದಿದೆ.

error: Content is protected !!
Scroll to Top