(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.23. ಕಮ್ಮನಹಳ್ಳಿ ಬಳಿಯ ಬಾಬು ಸಾಹೇಬ್ ಪಾಳ್ಯದಲ್ಲಿ ಮಂಗಳವಾರ ಕುಸಿತ ಆರು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿತ ಅವಘಡದಲ್ಲಿ ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಇದುವರೆಗೂ ಐದು ಕಾರ್ಮಿಕರ ಮೃತದೇಹ ಹೊರಕ್ಕೆ ತೆಗೆಯಲಾಗಿದೆ.
ಹರ್ಮನ್(26), ತ್ರಿಪಾಲ್(35) ಮತ್ತು ಮುಹಮ್ಮದ್ ಸಾಹಿಲ್(19) ಎಂಬವರ ಮೃತದೇಹಗಳನ್ನು ಕಟ್ಟಡಗಳ ಅವಶೇಷಗಳಡಿಯಿಂದ ರಕ್ಷಣಾ ತಂಡ ಹೊರತೆಗೆದಿದೆ. ಸತ್ಯರಾಜು ಮತ್ತು ಶಂಕರ್ ಎಂಬರ ಮೃತದೇಹಗಳನ್ನು ಮಂಗಳವಾರ ಹೊರತೆಗೆಯಲಾಗಿತ್ತು. ಅಗ್ನಿಶಾಮಕ ದಳ ಹಾಗೂ ಎನ್ಡಿಆರ್ಎಫ್ ಸಿಬ್ಬಂದಿ ರಾತ್ರಿ ಇಡೀ ಕಾರ್ಯಾಚರಣೆ ನಡೆಸಿದ್ದು, ಅವಶೇಷಗಳಡಿ ಸಿಲುಕಿದ್ದ ಏಳು ಮಂದಿಯನ್ನು ರಕ್ಷಿಸಿದ್ದಾರೆ. ಇದರೊಂದಿಗೆ ರಕ್ಷಿಸಲ್ಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.