(ನ್ಯೂಸ್ ಕಡಬ) newskadaba.com ಅ.23, ಬೆಂಗಳೂರು. ಆಂಗ್ಲ ಭಾಷೆಯಿಂದ ಕನ್ನಡಕ್ಕೆ ಅನುವಾದ ಮಾಡುವ ಸಮರ್ಥ ಕನ್ನಡ ಕಸ್ತೂರಿ ತಂತ್ರಾಂಶವನ್ನು ಇ-ಆಡಳಿತ ಇಲಾಖೆ ಸಿದ್ಧಪಡಿಸಿದ್ದು, ಶೀಘ್ರದಲ್ಲಿಯೇ ಈ ತಂತ್ರಾಂಶವನ್ನು ಲೋಕಾರ್ಪಣೆಗೊಳಿಸಲಾಗುವುದು ಎಂದು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಡಾ| ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.
ಮಂಗಳವಾರ ವಿಕಾಸಸೌಧದಲ್ಲಿ ರಾಜ್ಯ ಸರಕಾರದ ಇ-ಆಡಳಿತ ಇಲಾಖೆಯಿಂದ ಅನುಷ್ಠಾನಗೊಳಿಸಲಾಗಿರುವ ಇ-ಕನ್ನಡ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಯನ್ನು ನಡೆಸಿದ ಅವರು, ಉದ್ದೇಶಿತ ತಂತ್ರಾಂಶವು ಇಂದಿನ ಖಾಸಗಿ ತಂತ್ರಾಂಶಗಳಿಂದ ಅತಿ ಹೆಚ್ಚು ದಕ್ಷತೆಯನ್ನು ಹೊಂದಿದ್ದು ಸುಮಾರು 2.3 ಕೋಟಿ ಆಂಗ್ಲ ಹಾಗೂ ಕನ್ನಡ ಸಮಾನಾಂತರ ವಾಕ್ಯಗಳನ್ನು ಆಧರಿಸಿ ಸಿದ್ಧಗೊಳಿಸಿದೆ.