ವಯನಾಡ್ ಉಪಚುನಾವಣೆ- ಇಂದು ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ

(ನ್ಯೂಸ್ ಕಡಬ) newskadaba.com ವಯನಾಡ್, ಅ.23. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡ್ ಲೋಕಸಭೆ ಕ್ಷೇತ್ರಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ.

ನಾಮಪತ್ರ ಸಲ್ಲಿಕೆ ವೇಳೆ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಉಪಸ್ಥಿತರಿದ್ದರು.

Also Read  ಬಾಲಿವುಡ್ ನಟ ʻಸಲ್ಮಾನ್ ಖಾನ್ʼಗೆ ಕೊಲೆ ಬೆದರಿಕೆ ಕರೆ ಪ್ರಕರಣ ➤ 16 ವರ್ಷದ ಬಾಲಕ ಅರೆಸ್ಟ್

 

 

error: Content is protected !!