ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ- ಯುವಕನೋರ್ವನ ಬಂಧನ

(ನ್ಯೂಸ್ ಕಡಬ) newskadaba.com ಅ.24.  ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಜೀವ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಆರೋಪಿಯನ್ನು ಬಂಧೀಸಿರುವ ಕುರಿತು ವರದಿಯಾಗಿದೆ.

ಬಂಧಿತನನ್ನು ಜೆಮ್ ಶೆಡ್ ಪುರ ಮೂಲದ ತರಕಾರಿ ಮಾರಾಟಗಾರ ಶೇಖ್ ಹುಸೇನ್ ಮೌಸಿನ್ ಎಂದು ಗುರುತಿಸಲಾಗಿದೆ. ನಗರ ಸಂಚಾರ ನಿಯಂತ್ರಣ ಕೊಠಡಿಯ ವಾಟ್ಸಾಪ್ ನಂಬರ್ ಗೆ ಕಳೆದ ವಾರ 5 ಕೋಟಿ ಬೇಡಿಕೆಯ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಸಿದ ಪೊಲೀಸರು ಅನೇಕ ತಮಡ ರಚಿಸಿ ವಿವಿಧ ರಾಜ್ಯಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದರು. ಅಲ್ಲದೇ ಇದರ ಜೊತೆಗೆ ಸಂಚಾರ ಪೊಲೀಸರ ವಾಟ್ಸಾಪ್ ಸಹಾಯವಾಣಿಗೆ ಬೆದರಿಕೆ ಸಂದೇಶ ಬಂದಿದ್ದ ಅದೇ ನಂಬರಿನಿಂದ ಸೋಮವಾರದಂದು ಕ್ಷಮೆಯಾಚನೆ ಸಂದೇಶವೂ ಬಂದಿತ್ತು ಎಂದು ಪೊಲೀಸರು ತಿಳಿಸಿದ್ದರು.

error: Content is protected !!
Scroll to Top