(ನ್ಯೂಸ್ ಕಡಬ) newskadaba.com ಅ.24. ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾಗಿದ್ದ ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ತನ್ನ ಸ್ಥಾನ ಉಳಿಸಿಕೊಂಡಿದೆ. ಇದು ಕಾಂಗ್ರೆಸ್ ಆಡಳಿತದ ವೈಫಲ್ಯಕ್ಕೆ ಮತದಾರರು ಕೊಟ್ಟ ಉಡುಗೊರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿ ಅವರ ಅವಧಿಪೂರ್ವ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಅಕ್ಟೋಬರ್ 21ರಂದು ವಿಧಾನ ಪರಿಷತ್ ಚುನಾವಣೆ ನಡೆದಿದ್ದು, ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಅವರು ಗರಿಷ್ಠ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಅವರಿಗೆ ಅಭಿನಂದನೆಗಳು ಸಲ್ಲಿಸಿರುವ ಬಿವೈ ವಿಜಯೇಂದ್ರ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಜಿಲ್ಲೆಗಳು ಬಿಜೆಪಿ ಭದ್ರಕೋಟೆಗಳು ಎಂಬುದು ಮತ್ತೆ ಸಾಬೀತಾಗಿದೆ. ಅಲ್ಲದೇ ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ಇದು ಉತ್ತೇಜನ ಕೊಡಲಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.