ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಅ. 25. ಸ್ಥಳೀಯವಾಗಿ ಮೀನು ಸೇವನೆಯನ್ನು ಪ್ರೋತ್ಸಾಹಿಸಲು ಹಾಗೂ ತಾಜಾ ಮೀನು ಮತ್ತು ಮೀನು ಉತ್ಪನ್ನಗಳ ಮಾರಾಟಕ್ಕಾಗಿ “ಮತ್ಸ್ಯವಾಹಿನಿ” ಯೋಜನೆಯಡಿ ತ್ರಿಚಕ್ರ ವಾಹನಗಳನ್ನು ಪರವಾನಿಗೆ ಆಧಾರದಲ್ಲಿ ಪಡೆಯಲು ಆಸಕ್ತ ಮೀನು ಮಾರಾಟಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.


ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 10 ವಾಹನಗಳನ್ನು ನೀಡುವ ಗುರಿ ಇದೆ. ಆಯ್ಕೆಯಾಗುವ ಸಾಮಾನ್ಯ ವರ್ಗದ ಅರ್ಜಿದಾರರು ಇಲಾಖೆಗೆ ಭದ್ರತಾ ಠೇವಣಿಯಾಗಿ ರೂ. 1 ಲಕ್ಷ ಹಾಗೂ ಪರಿಶಿಷ್ಟ ಜಾತಿ/ಪಂಗಡ/ಮಹಿಳೆಯರು ರೂ. 50 ಸಾವಿರ ನೀಡಬೇಕು ಹಾಗೂ ಮಾಸಿಕ ರೂ. 3,000/- ಬಾಡಿಗೆ ಮೊತ್ತವನ್ನು ಪಾವತಿಸಬೇಕು. ಅರ್ಜಿ ಸಲ್ಲಿಸಲು ನವೆಂಬರ್ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಮಂಗಳೂರು ಜಿಲ್ಲಾ ಪಂಚಾಯತ್ ಕಚೇರಿ ಆವರಣ, ಕೊಟ್ಟಾರ, ಮಂಗಳೂರು ಅಥವಾ ಮೀನುಗಾರಿಕೆ ಸಹಾಯಕ ನಿರ್ದೇಶಕರು, ತಾಲೂಕು ಪಂಚಾಯತ್ ಕಟ್ಟಡ, ಪುತ್ತೂರು ಇವರನ್ನು ಸಂಪರ್ಕಿಸುವಂತೆ ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top