ಪ್ರಿಯಕರನೊಂದಿಗೆ ಸೇರಿ ಪತಿಯ ಕೊಲೆಗೈದ ಪತ್ನಿ..!

crime, arrest, suspected

(ನ್ಯೂಸ್ ಕಡಬ) newskadaba.com ಅ. 25. ಪ್ರಿಯಕರನೊಂದಿಗೆ ಸೇರಿ ವಿಷವುಣಿಸಿ ಬಳಿಕ ಉಸಿರುಗಟ್ಟಿಸಿ ಪತಿಯನ್ನೇ ಉಸಿರುಗಟ್ಟಿಸಿ ಕೊಲೆಗೈದ ಘಟನೆಗೆ ಸಂಬಂಧಿಸಿ ಇಬ್ಬರನ್ನು ಬಂಧಿಸಿದ ಘಟನೆ ಉಡುಪಿಯ ಮರ್ಣೆ ಗ್ರಾಮದಲ್ಲಿ ನಡೆದಿದೆ.

ಕೊಲೆಗೀಡಾದವರನ್ನು ಬಾಲಕೃಷ್ಣ ಎಂದು ಗುರುತಿಸಲಾಗಿದೆ. ಕಳೆದ 25 ದಿನಗಳಿಂದ ಜ್ವರ ಹಾಗೂ ವಾಂತಿಯ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕೃಷ್ಣ ಅವರಿಗೆ ಕಾಮಾಲೆ ರೋಗ ಎಂದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಅ.20ರಂದು ಬಾಲಕೃಷ್ಣ ಮನೆಯಲ್ಲೇ ಸಾವನ್ನಪ್ಪಿದ್ದರು. ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಪ್ರತಿಮಾಳ ಸಹೋದರ ನೀಡಿದ ದೂರಿನಂತೆ ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆಯ ವೇಳೆ ಪ್ರತಿಮಾ ಮತ್ತು ಆಕೆಯ ಪ್ರಿಯಕರ ದಿಲೀಪ್ ಮೇಲೆ ಸಂಶಯ ವ್ಯಕ್ತವಾಗಿ ವಿಚಾರಣೆಗೆ ಒಳಪಡಿಸಲಾಯಿತು. ಬಾಲಕೃಷ್ಣ ಸಾವಿನ ಬಳಿಕ ಪತ್ನಿ ಪ್ರತಿಮಾಳ ಚಲನವಲನ ಬಗ್ಗೆ ಆಕೆಯ ಸಹೋದರನೇ ಅನುಮಾನಗೊಂಡಿದ್ದ. ಸಾವಿನ ಬಗ್ಗೆ ಆಕೆಯನ್ನು ಪ್ರಶ್ನಿಸಿದ್ದಾನೆ. ಪ್ರತಿಮಾ ತನ್ನ ಸಹೋದರನ ಬಳಿ ಎಲ್ಲವನ್ನೂ ಹೇಳಿಕೊಂಡಿದ್ದಾಳೆ. ಊಟದಲ್ಲಿ ವಿಷ ಬೆರೆಸಿ ಬಳಿಕ ಬೆಡ್ ಶೀಟ್ ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ಪ್ರತಿಮಾ ಒಪ್ಪಿಕೊಂಡಿದ್ದಾಳೆ ಎನ್ನಲಾಗಿದೆ. ಪ್ರಿಯಕರನ ಜೊತೆ ಸೇರಿಕೊಂಡು ಪತಿ ಕೊಲೆ ಮಾಡಿರುವುದಾಗಿ ಆಕೆ ಒಪ್ಪಿಕೊಂಡಿದ್ದಾಳೆಂದು ತಿಳಿದುಬಂದಿದೆ.

Scroll to Top